ಬಾಗಲಕೋಟೆ:ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಬಂದ ಅಭ್ಯರ್ಥಿಗೆ ಪಂಚಾಯಿತಿ ಆವರಣದಲ್ಲೇ ಹೃದಯಾಘಾತವಾಗಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಇಳಕಲ್ ತಾಲೂಕಿನಲ್ಲಿ ಬುಧವಾರ ಸಂಭವಿಸಿದೆ.
ಯಮನಪ್ಪ ದೋಟಿಹಾಳ(36) ಮೃತ ದುರ್ದೈವಿ. ಇವರು ಗ್ರಾಮದ ವಾರ್ಡ್ ನಂಬರ್ 2ರಿಂದ ಕಂದಗಲ್ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಪಂಚಾಯಿತಿ ಆವರಣಕ್ಕೆ ಬರುತ್ತಿದ್ದಂತೆ ಹೃದಯಾಘಾತವಾಗಿದೆ.
ಗ್ರಾಮದ ಅಭಿವೃದ್ಧಿಗೆ ನೂರಾರು ಕನಸು ಕಟ್ಟಿದ್ದ ಯಮನಪ್ಪ ದೋಟಿಹಾಳ, ಹಳ್ಳಿ ರಾಜಕಾರಣಕ್ಕೆ ಎಂಟ್ರಿ ಕೊಡಲು ಎಲ್ಲ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಅದರಂತೆ ಎರಡನೇ ಹಂತದ ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಬಂದಿದ್ದರು. ಆದರೆ ವಿಧಿಯಾಟ ಬೇರೆಯೇ ಆಗಿತ್ತು. ನಾಮಪತ್ರ ಸಲ್ಲಿಸುವ ಮುನ್ನವೇ ಅವರ ಪ್ರಾಣವನ್ನ ಜವರಾಯ ಹೊತ್ತೊಯ್ದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಇಬ್ಬರು ಹೆಂಡಿರ ಗಂಡ ಮರವೇರಿ ಕುಳಿತ! ಆತನ ಬೇನೆ ಏನು ಗೊತ್ತಾ?

ಸಚಿವ-ಸಂಸದ-ಜಿಲ್ಲಾಧಿಕಾರಿಯನ್ನೇ ‘ಬೋ…ಮಗ’ ಎಂದ ಕಾಂಗ್ರೆಸ್​ ಶಾಸಕ! ಆಡಿಯೋ ವೈರಲ್​

ಬೈಕ್​ನಲ್ಲಿ ಕುಳಿತು ನಿದ್ರೆಗೆ ಜಾರಿದ ತಾಯಿ-ಮಕ್ಕಳು ತರಗೆಲೆಯಂತೆ ರಸ್ತೆಗೆ ಉರುಳಿದರು! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + seven =
Remember me
