ಧಾರವಾಡ:ಚಾಕುವಿನಿಂದ ಇರಿದು ಗ್ರಾಪಂ ಉಪಾಧ್ಯಕ್ಷನ ಕೊಲೆ ಮಾಡಲಾದ ಭೀಕರ ಘಟನೆ ಧಾರವಾಡ ತಾಲೂಕಿನ ಕೋಟೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪ್ರವೀಣ ಕಮ್ಮಾರ (36) ಎಂದು ಗುರುತಿಸಲಾಗಿದೆ. ಇವರು ಕೋಟೂರ ಗ್ರಾಪಂ ಉಪಾಧ್ಯಕ್ಷರೂ ಆಗಿದ್ದರು.
ಗ್ರಾಮದಲ್ಲಿ ರಾತ್ರಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯಲ್ಲಿ ಪ್ರಸಾದ ಹಂಚಲಾಗುತ್ತಿತ್ತು. ಈ ವೇಳೆ ಕೆಲವರ ಮಧ್ಯೆ ಜಗಳ ಉಂಟಾಗಿದೆ. ಈ ಸಂದರ್ಭ ಪ್ರವೀಣ ಜಗಳ ಬಿಡಿಸಿ ಕಳುಹಿಸಿದ್ದರು ಎನ್ನಲಾಗಿದೆ. ಜಗಳ ಮಾಡಿದ್ದ ಒಂದು ಗುಂಪು ಪುನಃ ಆಗಮಿಸಿ ಪ್ರವೀಣ್​​ಗೆ ಚಾಕು ಇರಿದಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳಗಿನ ಜಾವ ಚಿಕಿತ್ಸೆ ಫಲಿಸದೇ ಪ್ರವೀಣ ಸಾವನ್ನಪ್ಪಿದ್ದಾರೆ. ರಾಘವೇಂದ್ರ ಎಂಬಾತ ಸೇರಿದಂತೆ ನಾಲ್ವರಿಂದ ಕೃತ್ಯ ನಡೆದಿದ್ದು ಗರಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೋಟೂರ ಗ್ರಾಪಂ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ ನೀಡಿದ್ದು ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮೃತ ಪ್ರವೀಣ ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದರು ಎನ್ನಲಾಗಿದೆ. ಈ ಹಿನ್ನಲೆ ಗ್ರಾಮದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗಿದ್ದು ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಕ್ಕೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 5 =
Remember me
