ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ತನ್ನ ಕಾರ್ಯನೀತಿಯನ್ನು ಸಂರ್ಪೂಣ ಬದಲಿಸಲು ಮತ್ತು ಪಕ್ಷ ಸಂಘಟನೆ ಹೊಸ ಆಯಾಮ ನೀಡಲು ಸಜ್ಜಾಗುತ್ತಿದೆ. ಲೋಕಸಭೆ, ವಿಧಾನಸಭೆ ಉಪ ಚುನಾವಣೆ, ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸೋತು ಸುಣ್ಣವಾದ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ತನ್ನ ಸ್ಟ್ರಾಟಜಿಯನ್ನು ಬದಲು ಮಾಡಲು ಗಂಭೀರ ಚಿಂತನೆ ನಡೆಸಿದೆ.
ತನ್ನ ಹಳೆಯ ಶೈಲಿಯ ಎಲ್ಲ ಕಾರ್ಯ ಚಟುವಟಿಕೆಗಳನ್ನು ಬಿಟ್ಟು ಹೊಸ ತಂತ್ರ ಅಳವಡಿಸಿಕೊಂಡು ನಿರ್ವಹಣಾ ಚಾತುರ್ಯ ಪ್ರದರ್ಶಿಸಲು ಮುಂದಾಗಿದೆ.  ಯುವಕರನ್ನೇ ದೃಷ್ಟಿಯಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಪಕ್ಷಕ್ಕೆ ಚೈತನ್ಯ ತುಂಬಲು ವರಿಷ್ಠರು ತಾಲೀಮು ಆರಂಭಿಸಿದ್ದಾರೆ. ಜೆಡಿಎಸ್‌ನ ಯುವ ನಾಯಕರೆಂದೇ ಬಿಂಬಿತವಾಗಿರುವ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮುಂದಿಟ್ಟುಕೊಂಡು ಚುನಾವಣಾ ಕಾರ್ಯನೀತಿ ರೂಪಿಸಲಾಗುತ್ತಿದೆ.
ಅಣ್ತಮ್ಮರಿಂದ ರಣತಂತ್ರ ತಯಾರಿ:  ಈ ಚುನಾವಣೆಯಲ್ಲಿ ‘ಅಣ್ಣ-ತಮ್ಮ’ ಸೇರಿ ಚುನಾವಣಾ ರಣತಂತ್ರದ ಭೂಮಿಕೆ ತಯಾರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಹಿರಿಯರಿಗೆ ಕೋಕ್ ಕೂಡ ಕೊಡಲು ನಿರ್ಧರಿಸಿದ್ದಾರೆ. ಚುನಾವಣೆ ಗೆಲ್ಲಲೇಬೇಕಾದ ಅನಿವಾರ್ಯತೆ ಇರುವುದರಿಂದ ಕೆಲವು ಬದಲಾವಣೆ ಅವಶ್ಯ ಎಂಬ ಅಭಿಪ್ರಾಯಕ್ಕೂ ಬಂದಿದ್ದಾರೆ.
ಹಿರಿಯರ ಬದಲಾವಣೆಗೆ ನಿರ್ಧಾರ:  ಪಕ್ಷದ ಪದಾಧಿಕಾರಿಗಳಾಗಿ ಜವಾಬ್ದಾರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯರು ತಮಗೆ ವಹಿಸಿರುವ ಕೆಲಸವನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಯುವಕರಿಗೆ ಸ್ಥಾನ ಬಿಟ್ಟುಕೊಡುವುದು ಒಳಿತು ಎಂದು ಭಾರತೀನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸೂಚ್ಯವಾಗಿ ಹೇಳಿದ್ದಾರೆ.  ಅಲ್ಲದೆ, ಎಲ್ಲ ಹಿರಿಯರನ್ನೂ ಬದಲಿಸುವುದಿಲ್ಲ. ಹಿರಿಯರ ಮಾರ್ಗದರ್ಶನ ಅವಶ್ಯ. ಅವರ ಮಾರ್ಗದರ್ಶನದಲ್ಲೇ ಪಕ್ಷ ಸಂಘಟಿಸುವುದ ಜತೆಗೆ ಯವಕರಿಗೆ ಪ್ರಾಶಸ್ತ್ಯ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿಭಾನ್ವಿತ ಯುವಕರಿಗೆ ಪ್ರಾಧಾನ್ಯತೆ: ಯುವಕರಲ್ಲಿ ಪ್ರತಿಭಾನ್ವಿತರು, ಬುದ್ಧಿವಂತರಿದ್ದು ಅವರನ್ನು ಪಕ್ಷಕ್ಕೆ ಕರೆ ತರುವ ನಿಟ್ಟಿನಲ್ಲಿ ‘ಸಹೋದರರು’ಕಾರ್ಯಾಚರಣೆಗಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಒಂದೆರಡು ತಿಂಗಳಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬರಲಿದ್ದು, ಅವುಗಳನ್ನು ನಿರೀಕ್ಷೆಯಲ್ಲಿಟ್ಟುಕೊಂಡು ಪಕ್ಷ ಸಂಘಟನೆಯ ಕಾರ್ಯತಂತ್ರ ರೂಪಿಸಲು ಜೆಡಿಎಸ್ ವರಿಷ್ಠರು ಆಲೋಚನೆ ಮಾಡುತ್ತಿದ್ದಾರೆ.
ಮುಖಚಹರೆ ಬದಲಿಸಲು ತಂತ್ರ: ವಿಜನ್ 2023 ದೃಷ್ಟಿಯಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಮಾಡುವಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಪಕ್ಷದ ಮುಖಂಡರ ಸಭೆಯಲ್ಲಿ ಸಲಹೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆ ಮಾಡಿ ಮುಖಚಹರೆಯನ್ನೇ ಬದಲಿಸಲು ಕಾರ್ಯತಂತ್ರ ಸಿದ್ಧವಾಗುತ್ತಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 16 =
Remember me
