ರಾಯಚೂರು:ಗ್ರಾಮ ಪಂಚಾಯಿತಿಗೆ ಸೇರಿದ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ 15 ಜನ ಸದಸ್ಯರ ಸದಸ್ಯತ್ವವನ್ನ ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ರಾಯಚೂರು ತಾಲೂಕಿನ ಎಲೆ ಬಿಚ್ಚಾಲಿ ಗ್ರಾ. ಪಂ ಸದಸ್ಯರ ಸದಸ್ಯತ್ವವನ್ನು ರದ್ದುಪಡಿಸಿ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್​ ರಾಜ್ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. 14ನೇ ಹಣಕಾಸು ಯೋಜನೆ ಅನುದಾನ ಹಣವನ್ನು ವೈಯಕ್ತಿಕವಾಗಿ ಬಳಕೆ ಮಾಡಿಕೊಂಡ ಆರೋಪದ ಮೇಲೆ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷೆ ಸೇರಿ ಒಟ್ಟು 15 ಜನ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಮೂಲಕ ಆದೇಶ ಹೊರಡಿಸಲಾಗಿದೆ.
2016-2017ನೇ ಸಾಲಿನಲ್ಲಿ 14ನೇ ಹಣಕಾಸು ಯೋಜನೆಯಡಿ ಅನುದಾನದ ಚೆಕ್​ಗಳನ್ನು ಸದಸ್ಯರು ತಮ್ಮ ಪತಿ, ಮಾವನ ಹೆಸರಲ್ಲಿ ವೈಯಕ್ತಿಕವಾಗಿ ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ತನಿಖೆ ನಡೆಸಿ ಆರೋಪ‌ ಸಾಬೀತು ಹಿನ್ನೆಲೆ ಸಿಇಒ ಲಕ್ಷ್ಮೀಕಾಂತರಡ್ಡಿ ಡಿ.14ರಂದು ವರದಿಯನ್ನ ಪ್ರಾದೇಶಿಕ ಆಯುಕ್ತರಿಗೆ ಸಲ್ಲಿಸಿದ್ದಾರೆ.ಈ ವರದಿ ಆಧರಿಸಿ ಪ್ರಾದೇಶಿಕ ಆಯುಕ್ತರು 15 ಜನರ ಸದಸ್ಯತ್ವ ರದ್ದುಗೊಳಿಸು ವಂತೆ ಸರಕಾರಕ್ಕೆ ಶಿಫಾರಸು ಮಾಡಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 1 =
Remember me
