ಬೆಂಗಳೂರು:ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಡಿಸೆಂಬರ್​ 30ರಂದು ಪ್ರಕಟವಾಗಲಿದೆ. ಈ ಬಗ್ಗೆ ಸೋಮವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಬಹುತೇಕ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ದಾಖಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನನಗೆ ಬಂದ ಮಾಹಿತಿ ಪ್ರಕಾರ ಶೇಕಡ 85ರಿಂದ 90 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ಹೆಚ್ಚೇನೂ ಆಸಕ್ತಿ ತೋರಿರಲಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನಮ್ಮ ಶಾಸಕರು, ಸಚಿವರು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಕಾರ್ಯಕ್ಷೇತ್ರದಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ:‘ರಾಜ್ಯ ರಾಜಕಾರಣದಲ್ಲಿ ಧ್ರುವೀಕರಣ, ಬಹಳಷ್ಟು ಬದಲಾವಣೆ ನಿರೀಕ್ಷಿಸಿ’ : ಕೋಡಿ ಮಠ ಶ್ರೀ ಭವಿಷ್ಯ
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳಾಗಬೇಕು. ಗ್ರಾಮಗಳ ಸಬಲೀಕರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಯೋಜನೆಯನ್ನು ಪ್ರಾಮಾಣಿಕವಾಗಿ ಪೂರೈಸುವುದಕ್ಕೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಹೇಳಿದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಬೇಕೆಂದಿದ್ದೀರಾ.. ಇನ್ಮೇಲೆ ಇದೊಂದಕ್ಕೇ ಇ-ಮೇಲ್ ಮಾಡಿದರೆ ಸಾಕು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
