ಧಾರವಾಡ:ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದ್ದು, ಅನೇಕ ವಿಚಾರಗಳು ಗಮನಸೆಳೆಯತೊಡಗಿವೆ. ಇವುಗಳ ನಡುವೆ, ಸೋಲಿನ ಭೀತಿಗೆ ಅಭ್ಯರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಮನಕಲಕುವ ಸಂಗತಿ ಬೆಳಕಿಗೆ ಬಂದಿದೆ.
ಗರಗ ಗ್ರಾಮದ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನ ಅಭ್ಯರ್ಥಿ ದಾಮೋದರ ಕೃಷ್ಣಪ್ಪ ಎಲಿಗಾರ ಆತ್ಮಹತ್ಯೆ ಮಾಡಿಕೊಂಡವರು. ವಿಶಾಲ ಕೋ ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಏಜೆಂಟ್ ಆಗಿ ಕೆಲಸ ಮಾಡಿಕೊಂಡಿದ್ದ ದಾಮೋದರ ಕೃಷ್ಣಪ್ಪ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿದ್ದರು. ವಿಶಾಲ ಕೋ ಆಪರೇಟಿವ್ ಸೊಸೈಟಿ ಎಂಎಲ್​ಎ ಅಮೃತ ದೇಸಾಯಿ ಅವರ ಮಾಲೀಕತ್ವದಲ್ಲಿದೆ.
ಇದನ್ನೂ ಓದಿ:ಹಲ್ಲುಜ್ಜುವ ಪೇಸ್ಟ್ ಬದಲು ಬ್ರಷ್!
ಬೆಳಗ್ಗೆ ಮತದಾನ ಆರಂಭವಾದ ಸಮಯಕ್ಕೆ ಮತಕೇಂದ್ರಕ್ಕೆ ಭೇಟಿ ನೀಡಿದ್ದ ದಾಮೋದರ ಕೃಷ್ಣಪ್ಪ ಎಲಿಗಾರ ಬಳಿಕ ಮನೆಗೆ ವಾಪಸಾಗಿದ್ದರು. ಮನೆಯ ಅಟ್ಟಕ್ಕೇರಿದ ಅವರು ಬಳಿಕ ಕೆಳಗೆ ಇಳಿಯಲಿಲ್ಲ. ಸಂದೇಹಗೊಂಡ ಮನೆಯವರು ಅಟ್ಟಕ್ಕೇರಿ ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ದಾಮೋದರ ಅವರ ಮೃತದೇಹ ಪತ್ತೆಯಾಗಿದೆ. ಸೋಲಿನ ಭೀತಿಯಿಂದ ಹೀಗೆ ಮಾಡಿಕೊಂಡಿರಬಹುದು ಎಂಬ ವದಂತಿ ಹಬ್ಬಿದೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಮತದಾನ ಕೇಂದ್ರಕ್ಕೆ ರಿವಾಲ್ವರ್ ತಂದ ಅಧಿಕಾರಿ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
