ಬೆಳಗಾವಿ:ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಚಾಲ್ತಿಯಲ್ಲಿದ್ದು ವೈವಿಧ್ಯ ವಿಚಾರಗಳು ಗಮನಸೆಳೆಯತೊಡಗಿವೆ. ಮತಪತ್ರಗಳ ಎಡವಟ್ಟು ಒಂದೆಡೆಯಾದರೆ, ಮತದಾರರನ್ನು ಓಲೈಸುವ ಪ್ರಯತ್ನ ಮತ್ತೊಂದೆಡೆ. ಇವೆಲ್ಲದರ ನಡುವೆ ಅಧಿಕಾರಿಯೊಬ್ಬರು ಮತದಾನ ಕೇಂದ್ರಕ್ಕೆ ರಿವಾಲ್ವರ್ ತರುವ ಮೂಲಕ ರಾಜ್ಯದ ಗಮನಸೆಳೆದಿದ್ದಾರೆ.
ಬೆಳಗಾವಿಯ ದೇಸನೂರ ಗ್ರಾಮದಲ್ಲಿ ಈ ಘಟನೆ ನಡೆದಿರುವಂಥದ್ದು. ಮತಗಟ್ಟೆ ಅಧಿಕಾರಿಯಾಗಿರುವ ಸುಲೇಮಾನ್​ ಸನದಿ ಮತಗಟ್ಟೆಗೆ ರಿವಾಲ್ವರ್ ತಂದವರು. ಅಷ್ಟಕ್ಕೇ ಸುಮ್ಮನಾಗದ ಅವರು ರಿವಾಲ್ವರ್ ಅನ್ನು ಎಲ್ಲರಿಗೂ ಕಾಣುವಂತೆ ಹಿಡಿದು ಭಯದ ವಾತಾವರಣ ಸೃಷ್ಟಿಸಿದರು.
ಇದನ್ನೂ ಓದಿ:ಗ್ರಾಮಾಯಣ: ಅಭ್ಯರ್ಥಿಯ ಚುನಾವಣಾ ಚಿಹ್ನೆಯೇ ಬದಲು!
ಕೂಡಲೇ ಈ ವಿಚಾರ ಪೊಲೀಸರ ಗಮನಕ್ಕೆ ಬಂದಿದ್ದು, ಗ್ರಾಮೀಣ ಠಾಣೆಯ ಇನ್​ಸ್ಪೆಕ್ಟರ್​ ಸುನೀಲ್ ನಂದೇಶ್ವರ್ ಸ್ಥಳಕ್ಕಾಗಮಿಸಿ ಅಧಿಕಾರಿ ಸನದಿ ಮತ್ತು ಅವರ ಬಳಿ ಇದ್ದ ರಿವಾಲ್ವರ್ ಅನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ರಿವಾಲ್ವರ್​ಗೆ ಪರವಾನಗಿ ಇದ್ದು, ಅದು ಸರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತಗಟ್ಟೆಗೆ ರಿವಾಲ್ವರ್ ತಂದದ್ದೇಕೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ. ಸನದಿ ವಿರುದ್ಧ ಶಿಸ್ತು ಕ್ರಮಕ್ಕೆ ಚುನಾವಣಾ ಅಧಿಕಾರಿಗಳು ಮುಂದಾಗಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ತೊಲಮಾಮಡಿ ಚುನಾವಣೆ ಮುಂದೂಡಿಕೆ – ಗ್ರಾಪಂ ಚುನಾವಣಾ ಅಧಿಕಾರಿಗೆ ನೋಟಿಸ್ ಜಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
