ಬೆಂಗಳೂರು:ಮಂಡ್ಯ, ಕೋಲಾರದ ಗೆಲುವಿನಿಂದ ಜೆಡಿಎಸ್‌ನಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನೂ ವಿಶೇಷವಾಗಿ ಎಚ್.ಡಿ.ಕುಮಾರಸ್ವಾಮಿ ಕೇಂದ್ರದಲ್ಲಿ ಸಂಪುಟ ದರ್ಜೆ ಸಚಿವರಾದ ಲಾಗಾಯ್ತು ಜೆಡಿಎಸ್‌ನಲ್ಲಿ ಹೊಸ ಹುಮ್ಮಸ್ಸು ಮೂಡಿದೆ.
ಕಾಂಗ್ರೆಸ್ ಮಣಿಸಿದ ಹಮ್ಮು, ಕೇಂದ್ರ ಸಚಿವ ಸ್ಥಾನದ ಬಿಮ್ಮಿನಿಂದ ಜೆಡಿಎಸ್ ನಾಯಕರು ಬೀಗುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ತೀವ್ರ ಮುಜುಗರ ಅನುಭವಿಸುತ್ತಿದ್ದ ಜೆಡಿಎಸ್‌ಗೆ ಈಗ ಹೊಸ ಟಾಣಿಕ್ ಸಿಕ್ಕಿಂತಾಗಿದೆ. ಮಂಡ್ಯ ಗೆಲುವಂತೂ ಪಕ್ಷದಲ್ಲಿ ಬದಲಾವಣೆಯ ಗಾಳಿಯನ್ನೇ ಬೀಸಿದೆ.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಮೈಕೊಡವಿದೆ. ಪಕ್ಷಕ್ಕೆ ಗಟ್ಟಿ ನೆಲೆ ಇದೆ ಎಂಬುದನ್ನು ಈ ಚುನಾವಣೆ ಸಾಬೀತುಪಡಿಸಿದೆ. ಹಾಗಾಗಿ ಜೆಡಿಎಸ್ ಕಾರ್ಯಕರ್ತರ ಆಸೆ, ಆಕಾಂಕ್ಷೆಗಳು ಗರಿಗೆದರಿವೆ.
ಕಾಲು ಶತಮಾನದ ಬಳಿಕ ಜೆಡಿಎಸ್‌ಗೆ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿ ಬೆಂಗಳೂರಿಗೆ ಬರುತ್ತಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಭವ್ಯ ಸ್ವಾಗತ ನೀಡಲು ಜೆಡಿಎಸ್ ನಾಯಕರು, ಮುಖಂಡರು, ಕಾರ್ಯಕರ್ತರು ಮುಂದಾಗಿದ್ದಾರೆ.
ಶುಕ್ರವಾರ ಕುಮಾರಸ್ವಾಮಿ ಬೆಂಗಳೂರಿಗೆ ಆಗಮಿಸಲಿದ್ದು, ದೇವನಹಳ್ಳಿ ಬಳಿ ದೊಡ್ಡ ಸಮಾರಂಭ ಆಯೋಜಿಸಿ ಅಭಿನಂದನೆ ಸಲ್ಲಿಸುವ ಉದ್ದೇಶವನ್ನು ಜೆಡಿಎಸ್ ಇಟ್ಟುಕೊಂಡಿದೆ. ಅನೇಕ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು ಕುಮಾರಸ್ವಾಮಿ ಅವರನ್ನು ಖುದ್ದು ಭೇಟಿ ಮಾಡಿ ಶುಭ ಹಾರೈಸಲಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲವು ಮುಖಂಡರಿಗೆ ಮಾತ್ರ ಕುಮಾರಸ್ವಾಮಿ ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ದೇವನಹಳ್ಳಿ ಬಳಿ ಬೃಹತ್ ವೇದಿಕೆ ನಿರ್ಮಿಸಿ ಅಭಿನಂದಿಸಲು ಕಾರ್ಯಕರ್ತರು ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಳಿಕ ಶನಿವಾರ ಅಥವಾ ಭಾನುವಾರ ಮಂಡ್ಯದಲ್ಲಿ ಅಭಿಮಾನಿಗಳಿಂದ ಬೃಹತ್ ಅಭಿನಂದನಾ ಸಮಾರಂಭ ನಡೆಸಿ ಪಕ್ಷದ ಸಾಮರ್ಥ್ಯ ಸಾಬೀತುಪಡಿಸುವ ಉದ್ದೇಶವನ್ನೂ ಜೆಡಿಎಸ್ ನಾಯಕರು ಹೊಂದಿದ್ದಾರೆ. ಈ ಎರಡೂ ಕಾರ್ಯಕ್ರಮಗಳಿಗೆ ಜೆಡಿಎಸ್ ಪೂರ್ವ ತಯಾರಿ ನಡೆಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten − 2 =
Remember me
