ಕೋಲಾರ:ಸೌದಿ ಅರೇಬಿಯಾದಲ್ಲಿ ನಡೆದ ಸ್ನೂಕರ್ ವಿಶ್ವ ಚಾಂಪಿಯನ್ ಶಿಪ್ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ದೇಶಕ್ಕೆ ಹೆಮ್ಮೆ ತಂದಿರುವ ಕೋಲಾರ ಮೂಲದ ಕೀರ್ತನಾ ಪಾಂಡಿಯನ್​ರನ್ನು ಅದ್ಧೂರಿಯಾಗಿ ಸನ್ಮಾಯಿಸಲಾಯಿತು.
ಸ್ನೂಕರ್​ ಟೂರ್ನಿಯ ಅಂಡರ್ 16ನಲ್ಲಿ ಬೆಳ್ಳಿ, ಅಂಡರ್ 18 ನಲ್ಲಿ ಕಂಚು ಗೆದ್ದಿದ್ದ ಕೀರ್ತನಾ ಇದೀಗ ಅಂಡರ್ 21ನಲ್ಲಿ ಚಿನ್ನಕ್ಕೆ ಮುತ್ತಿಟ್ಟು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಕೋಲಾರಕ್ಕೆ ಆಗಮಿಸಿರುವ ಕೀರ್ತನಾರನ್ನ ಅವರ ಕಾಲೇಜಿನಲ್ಲಿ ಅದ್ದೂರಿಯಾಗಿ ಸನ್ಮಾನಿಸಲಾಗಿದೆ.
ಇದನ್ನೂ ಓದಿ:ಕರುನಾಡು ಬೆಳಗುವ ಗೃಹಜ್ಯೋತಿ ಯೋಜನೆ ಉದ್ಘಾಟನೆಗೆ ಕ್ಷಣಗಣನೆ : ಕಲಬುರಗಿಯಲ್ಲಿ ಸಕಲ ಸಜ್ಜು
ಕೆಜಿಎಫ್​ನ ಬೆಮಲ್‌ನಗರದ ನಿವಾಸಿ ಪಾಂಡಿಯನ್-ಜಯಲಕ್ಷ್ಮಿ ದಂಪತಿ ಪುತ್ರಿಯಾದ ಕೀರ್ತನಾ ಕೆಜಿಎಫ್​ನ ಜೈನ್ಸ್ ಕಾಲೇಜು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿಯಾಗಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ಸೌದಿಅರೇಬಿಯಾ ದೇಶದಲ್ಲಿ ನಡೆದ ಸ್ನೂಕರ್ ಕ್ರೀಡೆಯಲ್ಲಿ ಚಾಂಪಿಯನ್ ಆಗುವ ಮೂಲಕ, ತನ್ನ ಕಾಲೇಜುಗೆ, ಜಿಲ್ಲೆಗೆ ಮತ್ತು ರಾಜ್ಯದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕೀರ್ತನರನ್ನು ಮೆರವಣಿಗೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ನಂತರ ಕಾಲೇಜಿನಲ್ಲಿ ಸನ್ಮಾನ ಮಾಡುವ ಮೂಲಕ ಅಭಿನಂದಿಸಿದರು.
ನುಹ್ ಹಿಂಸಾಚಾರದ ಹಿಂದೆ ಭಾರಿ ಷಡ್ಯಂತ್ರವಿದೆ : ಹರಿಯಾಣ ಗೃಹ ಸಚಿವರ ಆರೋಪ

ಕೋರ್ಟ್​ನಲ್ಲೇ ಸಾರ್ವಜನಿಕವಾಗಿ ರಾಜೀನಾಮೆ ಘೋಷಿಸಿದ ನ್ಯಾಯಾಧೀಶರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
