ಬೆಂಗಳೂರು: ಬರದ ವಿಚಾರದಲ್ಲಿ ಸರ್ಕಾರ ಈ ಬಾರಿ ಹಸಿರು ಬರ ಪದ ಸೇರ್ಪಡೆ ಮಾಡಿದೆ. ಏನಿದು ಹಸಿರು ಬರ ಎಂಬ ಪ್ರಶ್ನೆಯೆ?ನೋಡಲು ಬೆಳೆ ಹಸಿರಾಗಿಯೇ ಕಾಣುತ್ತದೆ. ಆದರೆ ಅದರಿಂದ ಯಾವುದೇ ಸಲು ನಿರೀಕ್ಷಿಸಲು ಸಾಧ್ಯವಿಲ್ಲ. ಅಂತಹದ್ದನ್ನು ಹಸಿರು ಬರ ಎಂದು ವ್ಯಾಖ್ಯಾನಿಸಲಾಗುತ್ತದೆ.
ಬರ ಘೋಷಿತ ತಾಲೂಕುಗಳ ಹೊರತಾಗಿಯೂ ಅನೇಕ ತಾಲೂಕುಗಳಲ್ಲಿ ಸಮಯಕ್ಕೆ ಸರಿಯಾಗಿ ಮಳೆ ಬಂದಿಲ್ಲ, ಬೆಳೆಯೂ ಕೈಸೇರಿಲ್ಲ. ಅಕಾಲಿಕ ಮಳೆಯ ಕಾರಣದಿಂದಾಗಿ ಒಂದಷ್ಟು ಬೆಳೆ ಹಾನಿಯಾಗಿದೆ. ಆದರೆ ಅಕಾಲಿಕ ಮಳೆ ಆದಲ್ಲೆಲ್ಲ ಭೂಮಿಯಲ್ಲಿ ತೇವಾಂಶವಿದ್ದು, ಬೆಳೆ ಹಸಿರಾಗಿಯೇ ಕಾಣುತ್ತದೆ. ಉಪಗ್ರಹಚಿತ್ರದಲ್ಲಿ ವೀಕ್ಷಿಸಿದಾಗ ಬರ ಪೀಡಿತ ಪ್ರದೇಶದಲ್ಲೂ ತೇವಾಂಶದ ಹಸಿರು ಹೊದಿಕೆ ಕಂಡುಬರುತ್ತದೆ.
ಕೇಂದ್ರ ಸರ್ಕಾರ ಬರ ಘೋಷಣೆ ಮಾಡುವಾಗ ಉಪಗ್ರಹಚಿತ್ರಗಳನ್ನು ಪರಿಶೀಲಿಸುವುದು ವಾಡಿಕೆ. ಈ ಚಿತ್ರಗಳು ಬರ ಘೋಷಣೆಗೆ ಬಹುದೊಡ್ಡ ಅಡ್ಡಿಯಾಗುತ್ತಿವೆ. ಹಾಗಾಗಿ ಇಂತಹದ್ದನ್ನು ನಾವು ಹಸಿರು ಬರ ಎಂದು ಹೆಸರಿಸಿರುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.ಇಂತಹ ಪ್ರದೇಶಗಳಲ್ಲಿ ಕೃಷಿ ವಿ.ವಿ.ಗಳಿಂದ ವೈಜ್ಞಾನಿಕ ಸಂಶೋಧನೆ ನಡೆಸಿ ವರದಿ ತರಿಸಿಕೊಳ್ಳಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:seventeen − one =
Remember me
