ಬೆಂಗಳೂರು:ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದ ಹನುಮ ಧ್ವಜ ಹಾಗೂ ರಾಷ್ಟ್ರ ಧ್ವಜ ತೆರವು ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಇದರ ಬೆನ್ನಲ್ಲೇ ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್​ನಲ್ಲಿ ಹಾರಿಸಲಾದ ಹಸಿರು ಬಾವುಟ ಮತ್ತೊಂದು ಸುತ್ತಿನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಇತ್ತ ಶಿವಾಜಿನಗರದ ಚಾಂದಿನ ಚೌಕ್​ನಲ್ಲಿ ಹಸಿರು ಬಾವುಟ ಹಾರಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಈ ಕುರಿತು ಟ್ವೀಟ್​ ಮಾಡಿದ್ದ ಬಿಜೆಪಿ ನಾಯಕರು ತೆಗೆಸುವ ತಾಕತ್ ನಿಮಗೆ ಇಲ್ಲವಾ ಪೊಲೀಸರಿಗೆ ಸವಾಲ್​ ಎಸೆದಿದ್ದರು. ಇತ್ತ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹರಿಸು ಧ್ವಜವನ್ನು ತೆರವು ಮಾಡಿರುವ ಪೊಲೀಸರು ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಬಿಜೆಪಿ ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​, ಶಿವಾಜಿನಗರದ ಜನನಿಬಿಡ ಪ್ರದೇಶದಲ್ಲಿ ಹಾರಿಸಿದ್ದ ಹಸಿರು ಬಣ್ಣದ ಧ್ವಜದ ಬಗ್ಗೆ ನಾನು ಟ್ವೀಟ್ ಮಾಡಿದ ಬೆನ್ನಲ್ಲೇ, ಶಿವಾಜಿನಗರದ ಪೊಲೀಸರು, ಹಾಗೂ ಬೆಂಗಳೂರು ನಗರದ ಆಯುಕ್ತರು , ಕೂಡಲೇ ಅದನ್ನು ತೆಗೆಸಿ ಅಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡಕ್ಕೆ ನನ್ನ ಕೃತಜ್ಞಾಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಇದನ್ನೂ ಓದಿ:ಸೋಲಿನ ನಡುವೆಯೇ ಟೀಂ ಇಂಡಿಯಾಗೆ ಶಾಕ್​; ಎನ್​ಸಿಎ ಸೇರಿದ ಸ್ಟಾರ್​ ಆಲ್ರೌಂಡರ್​
ಮಾನ್ಯ@CPBlr@DCPEASTBCPಅವರೇ, ಈ ರೀತಿ ಶತ್ರು ದೇಶದ ಬಣ್ಣವನ್ನು ಹೋಲುವ ಹಸಿರು ಧ್ವಜವನ್ನು ಸಾರ್ವಜನಿಕ ಪ್ರದೇಶದಲ್ಲಿ ಹಾರಿಸುವುದು ನಮ್ಮ flag code ಗೆ ವಿರುದ್ದವಾದದ್ದಲ್ಲವೇ ? ಈ ಕೂಡಲೇ, ಇದನ್ನು ತೆಗೆದು ಇಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ. ಶಿವಾಜಿನಗರ ಇರುವುದು ಭಾರತದಲ್ಲಿ, ಪಾಕಿಸ್ತಾನದಲ್ಲಲ್ಲhttps://t.co/Ln6mx86Erd
ಬೆಂಗಳೂರಿನ ಶಿವಾಜಿನಗರದ ಚಾಂದಿನಿ ಚೌಕ್‌ನಲ್ಲಿನ ಬಿಬಿಎಂಪಿ ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ಹಾರಾಡುತ್ತಿರುವುದನ್ನು ರಾಮಚಂದ್ರ ಯರಗಲ್​ ಎಂಬುವವರು ಟ್ವೀಟ್‌ ಮಾಡಿದ್ದರು. ಈ ಬಾವುಟ ಯಾವ ಧರ್ಮದ್ದು ಎಂದು ‘ಕೈ’ ನಾಯಕರು ಉತ್ತರಿಸಬೇಕು. ಹಸಿರು ಬಾವುಟ ತೆಗೆಸುವ ತಾಕತ್ ನಿಮಗೆ ಇಲ್ಲವಾ ಎಂದು ಬರೆದುಕೊಂಡಿದ್ದರು.
ಇದರ ಬೆನ್ನಲ್ಲೇ ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಸಹ ಟ್ವೀಟ್ ಮಾಡಿ, ಪೂರ್ವ ವಿಭಾಗ ಡಿಸಿಪಿಯವರೇ ಈ ರೀತಿ ಶತ್ರು ದೇಶದ ಬಣ್ಣವನ್ನು ಹೋಲುವ ಹಸಿರು ಧ್ವಜವನ್ನು ಸಾರ್ವಜನಿಕ ಪ್ರದೇಶದಲ್ಲಿ ಹಾರಿಸುವುದು ನಮ್ಮ ಧ್ವಜ ನೀತಿಗೆ ವಿರುದ್ದವಾದದ್ದಲ್ಲವೇ ಈ ಕೂಡಲೇ, ಇದನ್ನು ತೆಗೆದು ಇಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ. ಶಿವಾಜಿನಗರ ಇರುವುದು ಭಾರತದಲ್ಲಿ, ಪಾಕಿಸ್ತಾನದಲ್ಲಲ್ಲ ಬರೆದುಕೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 10 =
Remember me
