ಬೆಂಗಳೂರು:ಜಿಎಸ್‌ಟಿ ತಾಂತ್ರಿಕ ಕಾರಣಗಳಿಂದ 16 ಸಾವಿರಕ್ಕೂ ಅಧಿಕ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆ ವಂಚಿತರಾಗಿದ್ದು, ಸರ್ಕಾರ ತಕ್ಷಣ ಈ ಲಾನುಭವಿಗಳಿಗೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದ್ದಾರೆ.
ಗೃಹ ಲಕ್ಷ್ಮಿ ಲಾನುಭವಿಗಳಿಗೆ ಹಣ ವರ್ಗಾಯಿಸಲು ಜಿಎಸ್‌ಟಿ ತಾಂತ್ರಿಕ ಕಾರಣ ಕೊಡುತ್ತಿರುವುದು ಸಮಾಧಾನಕರ ಉತ್ತರವಲ್ಲ. ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲು ಖಜಾನೆಯಲ್ಲಿ ಹಣವಿಲ್ಲದಿರುವುದರಿಂದ ತಾಂತ್ರಿಕ ಕಾರಣಗಳನ್ನು ಕೊಟ್ಟು ದಿನದೂಡಲಾಗುತ್ತಿದೆ ಎಂಬ ಅನುಮಾನ ಜನಸಾಮಾನ್ಯರಲ್ಲಿ ಮೂಡುವಂತಾಗಿದೆ. ಇಂತಹ ಆರೋಪಗಳಿಗೆ ಎಡೆಮಾಡಿಕೊಡದೆ ತಕ್ಷಣ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಆದಾಯ ತೆರಿಗೆ ಇಲಾಖೆ ಹಾಗೂ ವಾಣಿಜ್ಯ ಇಲಾಖೆಯ ಅಧಿಕಾರಿಗಳಿಗೆ ತುರ್ತು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆ ಕೊಡಬೇಕು. ಫಲಾನುಭವಿಗಳ ಪೈಕಿ ಕೆಲವರು ಪತಿ ಮತ್ತು ಮಕ್ಕಳ ದೆಸೆಯಿಂದ ಮನೆ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. ಹಾಗಾಗಿ ನಿಜವಾದ ಜಿಎಸ್‌ಟಿದಾರರು ಯಾರು ಎಂಬುದನ್ನು ಪತ್ತೆ ಹಚ್ಚಿ ಸಮಸ್ಯೆ ಬಗೆಹರಿಸಬೇಕು ಎಂದು ಸಲಹೆ ನೀಡಿದ್ದಾರೆ.
ಯೋಜನೆಗೆ ಅರ್ಹರಿದ್ದರೂ, ಅನರ್ಹತೆ ಪಟ್ಟಿಯಲ್ಲಿ ಇರುವವರ ಸಂಖ್ಯೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲೇ ಅಧಿಕವಾಗಿದೆ. ಅವುಗಳು ರಾಜ್ಯದಲ್ಲಿ ಅತಿಹೆಚ್ಚು ಬಡವರಿರುವ ಜಿಲ್ಲೆಗಳಾಗಿವೆ. ಆಸ್ಪತ್ರೆ ಖರ್ಚು, ದೈನಂದಿನ ಸಾಂಸಾರಿಕ ಖರ್ಚು, ಮಕ್ಕಳ ಕಲಿಕಾ ಸಾಮಗ್ರಿ-ಬಟ್ಟೆಬರೆಗಳ ಖರ್ಚಿಗೆ ಗೃಹಲಕ್ಷ್ಮಿ ಹಣದ ಮೇಲೆ ಅವಲಂಬಿತರಾಗಿದ್ದಾರೆ. ಇಂತಹ ಮಹಿಳೆಯರಿಗೆ ನಷ್ಟವಾಗಬಾರದು. ಆರ್ಥಿಕವಾಗಿ ಸಮಾಧಾನಕರ ಬದುಕು ಕಟ್ಟಿಕೊಳ್ಳುವಂತಾಗಬೇಕು. ರಾಜ್ಯ ಸರ್ಕಾರ ತಕ್ಷಣ ದೋಷಗಳನ್ನು ಸರಿಪಡಿಸಿ ಹಣವನ್ನು ವರ್ಗಾಯಿಸಬೇಕು ಎಂದು ಹೇಳಿದ್ದಾರೆ.
ತಡಮಾಡದೆ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಾಕಿ ಹಣ ಪಾವತಿಸಬೇಕು. ಇಲ್ಲದಿದ್ದರೆ ರಾಜ್ಯದ ಮಹಿಳೆಯರನ್ನು ಒಟ್ಟುಗೂಡಿಸಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಚಂದ್ರು ಸಿಎಂಗೆ ಬರೆದಿರುವ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
