ಬೆಳಗಾವಿ:ಬಸ್​ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಮುಸ್ಲಿಂ ಯುವಕರ ಗುಂಪೊಂದು ಬಸ್ಸನ್ನು ಅಡ್ಡಗಟ್ಟಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿ ಪುಂಡಾಟ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನಲ್ಲಿ ನಡೆದಿದೆ.
ಇತ್ತ ಪುಂಡರ ಗುಂಪು ಹಲ್ಲೆ ಮಾಡಿ ಪರಾರಿಯಾಗುತ್ತಿದ್ದಂತೆ ಸಾರಿಗೆ ನೌಕರರು ವೃತ್ತಿ ಸುರಕ್ಷತೆ ನೀಡುವಂತೆ ಆಗ್ರಹಿಸಿ ಬೈಲಹೊಂಗಲ ಪೋಲಿಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಬಾಲಿವುಡ್​ನಿಂದ ರಾಜಕೀಯಕ್ಕೆ ಎಂಟ್ರಿ ಕೊಟ್ಟಳು ಮತ್ತೊಬ್ಬ ಸ್ಟಾರ್ ನಟಿ; ಈಕೆ ತಂದೆ ಕೂಡ ಖ್ಯಾತ ರಾಜಕಾರಣಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಬಸ್​ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆ ಒಳಗೊಂಡಂತೆ ಮುಸ್ಲಿಂ ಯುವಕರ ಗುಂಪೊಂದು ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಇತ್ತ ಸಾರಿಗೆ ನೌಕರರು ಹಲ್ಲೆ ಖಂಡಿಸಿ ಬೈಲಹೊಂಗಲ ಠಾಣೆ ಮುಂದೆ ಪ್ರತಿಭಟಿಸಿದ ಪರಿಣಾಮ ಬೇರೆ ಊರುಗಳಿಗೆ ತೆರಳಬೇಕಿದ್ದ ಜನರು ಬಸ್​ಗಳು ಸಿಗದೆ ಹೈರಣಾಗಿದ್ದು ಮಾತ್ರ ಸುಳ್ಳಲ್ಲ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five × four =
Remember me
