ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಆಗಸ್ಟ್​ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್​ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಜಾರ್ಜ್​ ಭಾರತ್​ ಜೋಡೋ ಯಾತ್ರೆ ಸಂದರ್ಭದಲ್ಲಿ ನಾವು ಸಂವಾದದ ಮೂಲಕ ಜನರ ಕಷ್ಟಗಳನ್ನು ಆಲಿಸಿದ್ದೆವು. ಬೆಲೆ ಏರಿಕೆಯಿಂದ ತತ್ತರಿಸಿದ ಜನ ಹಲವು ಕಾರಣಗಳಿಂದ ಸಂಕಷ್ಟದಲ್ಲಿ ಸಿಲುಕಿದ್ದರು.
ಜನರ ಕೈಗಳನ್ನು ಬಲಪಡಿಸುವ ನಿಟ್ಟಿನಲ್ಲಿ ನಾವು ಐದು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ. ಅದರಂತೆ ಗೃಹಜ್ಯೋತಿ ಕೂಡ ಒಂದಾಗಿದ್ದು, ಆಗಸ್ಟ್​ 5ರಂದು ಕಲಬುರಗಿಯಲ್ಲಿ ರಾಜ್ಯಸಭೆ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ
ಜುಲೈ ತಿಂಗಳಿನಿಂದಲೇ ಉಚಿತ ವಿದ್ಯುತ್​ ಕೊಡಲಾಗುತ್ತಿದ್ದು, ಅದರ ಬಿಲ್​ಅನ್ನು ಆಗಸ್ಟ್​ ತಿಂಗಳಲ್ಲಿ ಕೊಡುತ್ತಿದ್ದೇವೆ. ಗೃಹಜ್ಯೋತಿ ಯೋಜನೆಗೆ ಇದುವರೆಗೂ 1 ಕೋಟಿ 45 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಯಾರು ಅರ್ಹರು ಇದ್ದಾರೆ, ಅವರು ಇನ್ನೂ ನೋಂದಣಿ ಮಾಡಲು ಅವಕಾಶ ಇದೆ.
ನೋಂದಣಿ ಮಾಡುವ ಕೊನೆಯ ದಿನಾಂಕವನ್ನು ನಿರ್ಧಾರ ಮಾಡಿಲ್ಲ. ಈ ನಿಟ್ಟಿನಲ್ಲಿ ಅರ್ಹತೆ ಉಳ್ಳವರು ಲಾಭ ಪಡೆದುಕೊಳ್ಳಬಹುದು ಎಂದು ಸಚಿವ ಜಾರ್ಜ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 13 =
Remember me
