ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್ 18ರ ಭಾನುವಾರದಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ ಹಲವರು ಅರರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಮೊದಲ ದಿನ ಅರ್ಜಿಸಲ್ಲಿಸಿದರೂ ಕೂಡಾ ನಿಮ್ಮ ಅರ್ಜಿ ಊರ್ಜಿತವಾಗದೇ ಹೋಗಿರಬಹದು.
200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಮೊದಲ ಎರಡು ದಿನ 1,61,958 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ. ಮೊದಲ ದಿನ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದವರು ಮತ್ತೆ ಪರಿಶೀಲನೆ ಮಾಡಬೇಕಾಗಿದೆ.
ಇದನ್ನೂ ಓದಿ:ಗ್ರೀನ್​ ಟೀ ತಯಾರಿಸುವಾಗ, ಕುಡಿಯುವಾಗ ಎಂದಿಗೂ ಈ ತಪ್ಪುಗಳನ್ನು ಮಾಡಲೇಬಾರದು!
ಸರ್ವರ್ ಸ್ಲೋ ಸಮಸ್ಯೆಯಿಂದ ಟಾರ್ಗೆಟ್ ರೀಚ್ ಮಾಡೋದು ಕಷ್ಟ ‌ಆಗುತ್ತಿದೆ. ಸರ್ವರ್ ಡೌನ್ ಆಗುತ್ತಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜನರು ನಾ ಮುಂದು ತಾ ಮುಂದು ಎಂದು ಮುಗಿಬೀಳುತ್ತಿದ್ದಾರೆ. ಮೊದಲ ಎರಡು ದಿನ ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ಲೋಪ ಆಗಿರುವ ಹಿನ್ನೆಲೆಯಲ್ಲಿ ಪ್ರಾರಂಭದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದ ಗ್ರಾಹಕರ ಅರ್ಜಿ ತಿರಸ್ಕೃತ ಸಾಧ್ಯತೆ ಇದೆ. ಅರ್ಜಿ ಸ್ವೀಕಾರ ಆಗಿದ್ರು, ಟ್ರ್ಯಾಕಿಂಗ್ ನಲ್ಲಿ ಮತ್ತೆ ಅರ್ಜಿ ಸಲ್ಲಿಸಿ ಅಂತಿರೋ ಲಿಂಕ್. ಮೊದಲ ಎರಡು ದಿನ 1,61,958 ಗ್ರಾಹಕರಿಂದ ಅರ್ಜಿ ಸಲ್ಲಿಕೆ, ಆರಂಭಿಕ ಹಂತದಲ್ಲಿ ಅರ್ಜಿ ಸಲ್ಲಿಕೆ ಆಗಲು ಬಹಳಷ್ಟು ಸಮಯ ತೆಗೆದುಕೊಂಡಿತ್ತು. ಸರ್ವರ್ ಡೌನ್ ಕೂಡ ಆಗಿತ್ತು. ಈ ವೇಳೆ ಹಾಕಿದ ಅರ್ಜಿಗಳು ಲಿಂಕ್ ಆಗದೇ ಉಳಿದಿರೋ ಸಾಧ್ಯತೆ ಇದೆ.
ನೀವೇನಾದ್ರೂ ಮೊದಲ ಎರಡು ದಿನದಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ರೇ, ಈ ಲಿಂಕ್ ಮೂಲಕ ನಿಮ್ಮ ಸ್ಟೇಟಸ್ ಚಕ್ ಮಾಡಿಕೊಳ್ಳಿhttps://sevasindhu.karnataka.gov.in/StatucTrack/Track_Statusಲಿಂಕ್ ಆಗದೆ ಇದ್ರೇ ಮತ್ತೆ ಅರ್ಜಿ ಸಲ್ಲಿಕೆ ಮಾಡಿ. ಇಲ್ಲವಾದಲ್ಲಿ ಆಗಸ್ಟ್ ತಿಂಗಳಲ್ಲಿ ಕೆರೆಂಟ್ ಬಿಲ್ ಕಟ್ಟಬೇಕಾಗುತ್ತದೆ.
ಜುಲೈ ತಿಂಗಳ ಉಚಿತ ಬಿಲ್ ಪಡೆಯಬೇಕಾದ್ರೆ ಜುಲೈ 25 ಅರ್ಜಿಸಲ್ಲಿಸಲು ಕೊನೆ ದಿನವಾಗಿದೆ. ಗೃಹ ಜ್ಯೋತಿಗೆ ಅರ್ಜಿ ಸಲ್ಲಿಸಿದ್ರು ಒಂದು ಭಾರಿ ಚೆಕ್ ಮಾಡಿಕೊಳ್ಳಿ. ಇಲ್ಲ ಅಂದ್ರೆ ಆಗಸ್ಟ್ ತಿಂಗಳಲ್ಲಿ ಬಿಲ್ ಕಟ್ಟಬೇಕಾಗಬಹುದು.
ಜೈನಮುನಿ ಕಾಮಕುಮಾರ ನಂದಿ ಮಹರಾಜ ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್​: FIRನಲ್ಲಿ ಮಹತ್ವದ ಮಾಹಿತಿ ಬಹಿರಂಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
