ಬೆಂಗಳೂರು:ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ ಉಚಿತ್​ ವಿದ್ಯುತ್​ನ್ನು ನೀಡುವುದಾಗಿ ಹೇಳಿತ್ತು. ಅದರಂತೆ ಈ ಯೋಜನೆಯನ್ನು ಜೂನ್​ 1ರಿಂದ ರಾಜ್ಯದಲ್ಲಿ ಜಾರಿ ಮಾಡಲಾಗಿದೆ. ಆದರೆ ಈ ಯೋಜನೆಯ ಕುರಿತಾಗಿ ಹಲವಾರು ಗೊಂದಲಗಳು ಜನರಲ್ಲಿವೆ. ಅದಕ್ಕಾಗಿ ಸರ್ಕಾರವೇ FAQನ್ನು ರಚಿಸಿ, ಜನರ ಗೊಂದಲಗಳನ್ನು ನಿವಾರಿಸಲು ಮುಂದಾಗಿದೆ.
ಇದನ್ನೂ ಓದಿ:ಮಹಿಳೆ ಜತೆ ಅಸಭ್ಯ ವರ್ತನೆ ಆರೋಪ: ಎಎಸ್​ಐಗೆ ಅಟ್ಟಾಡಿಸಿ ಥಳಿಸಿದ ಗ್ರಾಮಸ್ಥರು, ವಿಡಿಯೋ ವೈರಲ್​
ಸಾಮಾನ್ಯವಾಗಿ ಜನರು ಕೇಳಬಹುದಾದ ಪ್ರಶ್ನೆಗಳಿಗೆ ಸ್ವತಃ ಇಂಧನ ಇಲಾಖೆಯು ಸ್ಪಷ್ಟಿಕರಣವನ್ನು ನೀಡಿದೆ. ಗೃಹ ಜ್ಯೋತಿ ಯೋಜನೆಯಡಿ ಪದೇ ಪದೇ ಕೇಳಲಾಗುವ ಪ್ರಶ್ನೆಗಳ ಪಟ್ಟಿ ಹಾಗೂ ಉತ್ತರ ಇಂತಿದೆ.
1. ನಾನು ಈ ಯೋಜನೆಗೆ ಅರ್ಹವೇ?ಕರ್ನಾಟಕ ರಾಜ್ಯದ ಎಲ್ಲಾ ಗೃಹ ಬಳಕೆ ಗ್ರಾಹಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ.
2. ಗೃಹ ಜ್ಯೋತಿ ಯೋಜನೆ ಎಂದರೇನು?ಗೃಹ ಜ್ಯೋತಿ ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ 200 ಯೂನಿಟ್‌ಗಳನ್ನು ಒಳಗೊಂಡಂತೆ ಉಚಿತ ವಿದ್ಯುತ್​ನ್ನು ಒದಗಿಸುತ್ತದೆ.
3. ಈ ಯೋಜನೆಯನ್ನು ಪಡೆಯಲು ನಾನು ಏನು ಮಾಡಬೇಕು?ಈ ಯೋಜನೆಯನ್ನು ಪಡೆಯಲು ಪ್ರತಿ ಗೃಹಬಳಕೆ ಗ್ರಾಹಕರು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಇದರ ಲಿಂಕ್​ನ್ನು ಶೀಘ್ರದಲ್ಲೇ ಹಂಚಿಕೊಳ್ಳಲಾಗುವುದು. ನೋಂದಣಿ ಜೂನ್ 15ರಿಂದ ಪ್ರಾರಂಭವಾಗುತ್ತದೆ.
4. ಈ ಯೋಜನೆಯನ್ನು ಯಾವಾಗಿನಿಂದ ಜಾರಿಗೆ ತರಲಾಗುತ್ತದೆ?2023ರ ಜುಲೈನಲ್ಲಿ ಬಳಸಿದ ವಿದ್ಯುತ್‌ ಬಳಕೆಯನ್ನು, 2023ರ ಆಗಸ್ಟ್​​ನಲ್ಲಿ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು.
5. ಈ ಯೋಜನೆಯನ್ನು ನಾನು ಹೇಗೆ ಮತ್ತು ಎಲ್ಲಿ ಪಡೆಯಬಹುದು?ಈ ಯೋಜನೆಯನ್ನು ಪಡೆಯಲು ಕರ್ನಾಟಕ ಸರ್ಕಾರದ ಸೇವಾ ಸಿಂಧು ವೆಬ್​ಸೈಟ್​​ನಲ್ಲಿ ಅರ್ಜಿ ಸಲ್ಲಿಸಬೇಕು. ಇದರ ಲಿಂಕ್​ನ್ನು ಶೀಘ್ರದಲ್ಲೇ ಒದಗಿಸಲಾಗುವುದು. ನೋಂದಣಿಯು ಜೂನ್ 15ರಿಂದ ಪ್ರಾರಂಭವಾಗುತ್ತದೆ.
6. ಈ ಯೋಜನೆಯನ್ನು ಆಫ್​ಲೈನ್​(offline) ಮೂಲಕ ನಾನು ಪಡೆಯಬಹುದೇ?ಹೌದು, ಎಲ್ಲಾ ಗೃಹಬಳಕೆ ಗ್ರಾಹಕರಿಗೆ ಗ್ರಾಮ ಒನ್‌, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.
7. ಈ ಯೋಜನೆ ಪಡೆಯಲು ಯಾವುದೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು?ಆಧಾರ್ ಸಂಖ್ಯೆ, ವಿದ್ಯುತ್​ ಬಿಲ್​ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ/ಭೋಗ್ಯದ ಕರಾರು ಪತ್ರ (ಬಾಡಿಗೆ/ಭೋಗ್ಯದಾರರಾಗಿದ್ದಲ್ಲಿ) ಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ IDಯನ್ನು ಸಲ್ಲಿಸುವುದು.
ಇದನ್ನೂ ಓದಿ:ಒಡಿಶಾ ರೈಲು ದುರಂತ; ಪರಿಹಾರಕ್ಕಾಗಿ ಬೇರೆ ಶವವನ್ನು ತನ್ನ ಗಂಡ ಎಂದ ಮಹಿಳೆಗೆ ಕಾದಿತ್ತು ಬಿಗ್​ ಶಾಕ್​!
8. ಅರ್ಜಿ ಸಲ್ಲಿಸುವಾಗ ನಾನು ಶುಲ್ಕ ಪಾವತಿಸಬೇಕೆ?ಈ ಯೋಜನೆಯಡಿಯಲ್ಲಿ ಯಾವುದೇ ಶುಲ್ಕವನ್ನು ಸೇವಾ ಸಿಂಧು ಪೋರ್ಟಲ್​ನಲ್ಲಿ ಪಾವತಿಸಬೇಕಾಗಿರುವುದಿಲ್ಲ.
9. ನಾನು ಜೂನ್ ತಿಂಗಳ ವಿದ್ಯುತ್ ಬಿಲ್​ನ್ನು ಪಾವತಿಸಬೇಕೆ?ಹೌದು, ಈ ಯೋಜನೆಯು 2023ರ ಜುಲೈ ವಿದ್ಯುತ್ ಬಳಕೆಗೆ ಅನ್ವಯಿಸಲಿದ್ದು, 2023ರ ಆಗಸ್ಟ್ 1ನೇ ಹಾಗೂ ನಂತರದ ಮಾಪಕ ಓದುವ ದಿನಾಂಕದಿಂದ ಅನ್ವಯಿಸುತ್ತದೆ.
10. ನನಗೆ ಒಂದಕ್ಕಿಂತ ಹೆಚ್ಚು ವಿದ್ಯುತ್ ಮಾಪಕಗಳಿದ್ದರೆ, ನಾನು ಈ ಯೋಜನೆಗೆ ಅರ್ಹನೇ?ಇಲ್ಲ, ಪ್ರತಿ ಗ್ರಾಹಕರು ಒಂದು ಮೀಟರ್​ಗೆ ಮಾತ್ರ ಈ ಯೋಜನೆಯಡಿ ಅರ್ಹರಾಗಿರುತ್ತಾರೆ.
11. ಅರ್ಜಿ ಸಲ್ಲಿಸಿದ ನಂತರ ನಾನು ಯಾವುದೇ ಸ್ವೀಕೃತಿಯನ್ನು ಪಡೆಯುತ್ತೇನೆಯೇ?ಹೌದು, ಸೇವಾ ಸಿಂಧುವಿನಿಂದ ಸ್ವೀಕೃತಿ ಸಂದೇಶವನ್ನು ನೋಂದಾಯಿತ ಗ್ರಾಹಕರಿಗೆ ಇಮೇಲ್ ಅಥವಾ SMS ಮೂಲಕ ಕಳುಹಿಸಲಾಗುತ್ತದೆ.
12. ನಾನು ಈಗಾಗಲೇ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದೇನೆ. ಯೋಜನೆಯ ಲಾಭವು ಯಾವಾಗ ನನ್ನ ಖಾತೆಗೆ ಸೇರಲು ಪ್ರಾರಂಭವಾಗುತ್ತದೆ?2023ರ ಜುಲೈನಲ್ಲಿ ನೀಡಿದ ಬಿಲ್​ನ್ನು ಯೋಜನೆಯ ಲಾಭವಿಲ್ಲದೆ ಪಾವತಿಸಬೇಕಾಗುತ್ತದೆ. ಯೋಜನೆಯ ಪ್ರಯೋಜನಗಳು ಮೀಟರ್ ಓದುವ ದಿನಾಂಕದಿಂದ ಅಂದರೆ 2023ರ 1ನೇ ಆಗಸ್ಟ್​​ನಿಂದ ಅಥವಾ ನಂತರ ಅನ್ವಯಿಸುತ್ತದೆ.
13. ನಾನು ಅಪಾರ್ಟೆಂಟ್ (ವಸತಿ ಸಮುಚ್ಚಯ) ಮಾಲೀಕನಾಗಿದ್ದೇನೆ, ನಾನು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದೇ?ಹೌದು, ಪ್ರತ್ಯೇಕ ವಿದ್ಯುತ್ ಮೀಟರ್‌ಗಳು ಲಭ್ಯವಿದ್ದರೆ ಅಥವಾ ಸ್ಥಾಪಿಸಿದ್ದರೆ ಯೋಜನೆಗೆ ಅರ್ಜಿ ಸಲ್ಲಿಸಬಹುದು.
14. ನಾನು ಬಾಡಿಗೆದಾರ; ಬಿಲ್ ಮಾಲೀಕರ ಹೆಸರಿನಲ್ಲಿದೆ. ನನಗೂ ಯೋಜನೆ ಅನ್ವಯವಾಗುವುದೇ?ಹೌದು, ಆಧಾರ್ ಸಂಖ್ಯೆ, ಬಿಲ್​ನಲ್ಲಿ ನಮೂದಿಸಲಾಗಿರುವ ಗ್ರಾಹಕರ ಸಂಖ್ಯೆ/ಖಾತೆ ಸಂಖ್ಯೆ, ಬಾಡಿಗೆ ಭೋಗ್ಯದ ಕರಾರು ಪತ್ರ (ಬಾಡಿಗೆಭೋಗ್ಯದಾರರಾಗಿದ್ದಲ್ಲಿ) ಸಲ್ಲಿಸುವುದು ಅಥವಾ ಸಂಬಂಧಿತ ವಿಳಾಸವನ್ನು ಸೂಚಿಸುವ ವೋಟರ್ ID ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದು.
15. ಯೋಜನೆಯ ಅಡಿಯಲ್ಲಿ ಬಾಡಿಗೆ/ಭೋಗ್ಯದಾರನಾಗಿ ನಾನು ನೋಂದಾಯಿಸಲು ಸಲ್ಲಿಸಬೇಕಾದ ದಾಖಲೆಗಳು ಯಾವುದು?ಬಾಡಿಗೆ ಭೋಗ್ಯದಾರರು ವಿಳಾಸ ಪುರಾವೆಯೊಂದಿಗೆ ನೋಂದಾಯಿಸಿಕೊಳ್ಳಬಹುದು. ಸದರಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ಆಧಾರ್ ಜೊತೆಗೆ ಬಾಡಿಗೆ ಭೋಗ್ಯದ ಕರಾರು ಪತ್ರವನ್ನು ಸಲ್ಲಿಸುವುದು.
16. ನಾನು 2 ತಿಂಗಳ ಹಿಂದೆ ಮನೆಯನ್ನು ಬದಲಾಯಿಸಿದ್ದೇನೆ, ನನಗೆ ಲಾಭ ಸಿಗುತ್ತದೆಯೇ?ಹೌದು, ಹೊಸ ಸಂಪರ್ಕಕ್ಕಾಗಿ ನಿಯಮಾವಳಿಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು.
ಇದನ್ನೂ ಓದಿ:ಆಮ್ಲೆಟ್, ಜ್ಯೂಸ್ ಆರ್ಡರ್ ಮಾಡಿ ಬಿಲ್ ಕೊಡದ ಸಬ್-ಇನ್‌ಸ್ಪೆಕ್ಟರ್, 3 ಮಹಿಳಾ ಕಾನ್‌ಸ್ಟೆಬಲ್‌ಗಳು ಅಮಾನತು!
17. ನಾನು ಅಂಗಡಿಯ ಮಾಲೀಕನಾಗಿದ್ದೇನೆ. ನಾನು ಸಹ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಸಲ್ಲಿಸಬಹುದೇ?ಇಲ್ಲ, ಗೃಹಬಳಕೆದಾರರಿಗೆ ಮಾತ್ರ ಈ ಯೋಜನೆ ಅನ್ವಯಿಸುತ್ತದೆ.
18. ನಾನು ಎಷ್ಟು ಉಚಿತ ಯೂನಿಟ್ ವಿದ್ಯುತ್‌ಗೆ ಅರ್ಹನಾಗುತ್ತೇನೆ? ತಿಂಗಳಿಗೆ 200 ಯೂನಿಟ್​​​ಗಳಿಗೆ ನಾನು ಅರ್ಹನೇ?2022-23ರ ಸರಾಸರಿ ವಿದ್ಯುತ್ ಬಳಕೆ+ಶೇಕಡ 10% ಹೆಚ್ಚಳದ (ಎರಡು ಸೇರಿಸಿದರೆ ಒಟ್ಟು 200 ಯೂನಿಟ್‌ಗಳಿಗಿಂತ ಒಳಗಿರಬೇಕು) ಸರಾಸರಿ ಬಳಕೆಯ ಆಧಾರದ ಮೇಲೆ ಲೆಕ್ಕ ಹಾಕಲಾಗುತ್ತದೆ.
19. ವಿದ್ಯುತ್ ಬಿಲ್ಲಿನ ಖಾತೆ ಸಂಖ್ಯೆಯನ್ನು ನಾನು ಎಲ್ಲಿ ಹುಡುಕಬೇಕು?ಖಾತೆ ಸಂಖ್ಯೆಯು ಪ್ರತಿ ತಿಂಗಳ ವಿದ್ಯುತ್‌ ಬಿಲ್‌ನಲ್ಲಿ ಲಭ್ಯವಿರುತ್ತದೆ.
20. ಈ ಯೋಜನೆಯನ್ನು ಪಡೆಯಲು ಖಾತೆ ಸಂಖ್ಯೆಯೊಂದಿಗೆ ಆಧಾರ್​ನ್ನು ಲಿಂಕ್ ಮಾಡುವುದು ಕಡ್ಡಾಯವೇ?ಹೌದು, ಗ್ರಾಹಕ ಸಂಖ್ಯೆ/ಖಾತೆ ಸಂಖ್ಯೆಯೊಂದಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
21. ನನ್ನ ಆಧಾರ್ ಕರ್ನಾಟಕದ ಹೊರಗೆ ನೋಂದಾಯಿಸಲ್ಪಟ್ಟಿದೆ. ನಾನು ಈ ಯೋಜನೆ ಪಡೆಯಲು ಅರ್ಹನಾಗುತ್ತೇನೆಯೇ?ಹೌದು, ನೀವು ಕರ್ನಾಟಕದ ವಿಳಾಸ ಪುರಾವೆಯೊಂದಿಗೆ ಕರ್ನಾಟಕದಲ್ಲಿ ಎಲ್ಲಿಯಾದರೂ ವಾಸಿಸುತ್ತಿದ್ದರೆ, ನೀವುಯೋಜನೆಗೆ ಅರ್ಹರಾಗಿದ್ದೀರಿ.
22. ನಾನು ವಿದ್ಯುತ್ ಬಿಲ್ ಬಾಕಿಯನ್ನು ಉಳಿಸಿಕೊಂಡಿದ್ದರೆ, ನಾನು ಈ ಯೋಜನೆಗೆ ಅರ್ಹನೇ?ಹೌದು, ಆದರೆ ಜೂನ್ 30ರವರೆಗಿನ ವಿದ್ಯುತ ಬಾಕಿಯನ್ನು 3 ತಿಂಗಳೊಳಗೆ ಪಾವತಿಸಬೇಕು. ಪಾವತಿಸದಿದ್ದರೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.
23. ಒಂದು ವೇಳೆ ನಾನು ಈ ಯೋಜನೆಯ ಫಲಾನುಭವಿಯಾಗಿ ನನಗೆ ನಿಗದಿಪಡಿಸಿರುವ ಉಚಿತ ವಿದ್ಯುತ್​ಗಿಂತ ಜಾಸ್ತಿ ಯೂನಿಟ್ ಬಳಸಿದರೆ, ನಾನು ಆ ಹೆಚ್ಚಿನ ಯೂನಿಟ್ ಗಳಿಗೆ ಪಾವತಿಸಬೇಕಾಗುತ್ತದೆ ಎಂಬುದು ನನಗೆ ತಿಳಿದಿದೆ. ಆದರೆ ಆ ಹೆಚ್ಚಿನ ಯೂನಿಟ್ ಬಳಕೆಯ ಬಿಲ್​ನ್ನು ಪಾವತಿಸದಿದ್ದರೆ, ನನ್ನನ್ನು ಈ ಯೋಜನೆಯಿಂದ ಅನರ್ಹಗೊಳಿಸಲಾಗುವುದೇ?ಇಲ್ಲ. ಬಾಕಿ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಬಾಕಿಯನ್ನು ಪಾವತಿಸಿದ ನಂತರ ಪುನಃ ಈ ಯೋಜನೆಯ ಸೌಲಭ್ಯಗಳನ್ನು ಪಡೆಯಬಹುದು.
ಇದನ್ನೂ ಓದಿ:ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
24. ವಿದ್ಯುತ್ ಬಿಲ್ ನನ್ನ ದಿವಂಗತ ತಂದೆಯ ಹೆಸರಿನಲ್ಲಿದೆ? ಇದಕ್ಕಾಗಿ ನಾನು ಹೇಗೆ ಅರ್ಜಿ ಸಲ್ಲಿಸಬಹುದು?ವಿದ್ಯುತ್ ಸಂಪರ್ಕವನ್ನು ನಿಮ್ಮ ಹೆಸರಿಗೆ ವರ್ಗಾಯಿಸಬೇಕು. ತದ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು. ಹೆಸರಿನ ಬದಲಾವಣೆಯನ್ನು ಎಲ್ಲಾ ಉಪ ವಿಭಾಗಗಳಲ್ಲಿನ ಜನಸ್ನೇಹಿ ವಿದ್ಯುತ್‌ ಸೇವಾ ಕೌಂಟರ್‌ಗಳಲ್ಲಿ ಮಾಡಲಾಗುತ್ತದೆ.
25. ನನ್ನ ಮಾಸಿಕ ಬಳಕೆಯು 200 ಯೂನಿಟ್‌ಗಳಿಗಿಂತ ಹೆಚ್ಚಿದ್ದರೆ, ಸಂಪೂರ್ಣ ಬಿಲ್ ಮೊತ್ತವನ್ನು ಪಾವತಿಸಬೇಕೇ?ಹೌದು. ಆ ನಿರ್ದಿಷ್ಟ ತಿಂಗಳಿಗೆ ಮಾತ್ರ ನೀವು ಸಂಪೂರ್ಣ ಬಿಲ್ ಮೊತ್ತವನ್ನು ಪಾವತಿಸಬೇಕಾಗುತ್ತದೆ.
26. ನನ್ನ ವಿದ್ಯುತ್ ಬಳಕೆಯು ಉಚಿತ ಯೂನಿಟ್​ಗಳಿಗಿಂತ ಕಡಿಮೆಯಿದ್ದರೆ ಬಿಲ್ ಮೊತ್ತ ಏನಾಗುತ್ತದೆ?ವಿದ್ಯುತ್ ಬಳಕೆಯು ಅರ್ಹ ಯೂನಿಟ್ ಗಳಿಗಿಂತ ಕಡಿಮೆಯಿದ್ದರೆ ನೀವು ಶೂನ್ಯ ಬಿಲ್​ನ್ನು ಪಡೆಯುತ್ತೀರಿ.
ಈ ಕುರಿತಾಗಿ ಯಾವುದೇ ಸಂದೇಹಗಳಿದ್ದರೆ, ಜನರು ಸರ್ಕಾರದ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಳ್ಳಬೇಕು.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + one =
Remember me
