ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಜುಲೈ 19ರಂದು ಚಾಲನೆ ದೊರೆಯಲಿದ್ದು, ಕಾರ್ಯಕ್ರಮಕ್ಕೆ ಹಲವು ಗಣ್ಯರಿಗೆ ಆಹ್ವನ ನೀಡಲಾಗಿದೆ.
ಜುಲೈ 19 ಸಂಜೆ 5 ಘಂಟೆ ಗೃಹಲಕ್ಷ್ಮಿ ಯೋಜನೆಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲಿನಲ್ಲಿ ಚಾಲನೆ ದೊರೆಯಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್​ ಯೋಜನೆಯ ಫಲಾನುಭವಿ ಮಂಜೂರಾತಿ ಆದೇಶ ಪ್ರತಿಯನ್ನು ಹಂಚಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಯೋಜನೆಯ ಪೋಸ್ಟರ್​ ಮತ್ತು ಲಾಂಛನವನ್ನು ಅನಾವರಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಇ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್​ ಹಾಗೂ ರಾಜೀವ್​ ಚಂದ್ರಶೇಖರ್​ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ:ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ನಮ್ಮ ಇಲಾಖೆಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಧಿಕಾರಿಗಳು, ಸಿಬ್ಬಂದಿಗೆ ತಳ ಹಂತದಿಂದ ತರಬೇತಿ ಕೊಟ್ಟಿದ್ದೇವೆ. ನಾಡಕಚೇರಿ, ಗ್ರಾಮ ಒನ್, ಬೆಂಗಳೂರು ಒನ್ ಸಿಬ್ಬಂದಿಗೂ ತರಬೇತಿ ನೀಡಲಾಗಿದೆ.
ಮನೆ ಯಜಮಾನಿಗೆ ಎರು ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಪತಿಯ ಆಧಾರ್ ​​ಕಾರ್ಡ್ ಕೂಡ ಬೇಕಾಗುತ್ತೆ. ಆಧಾರ್​ ಜತೆಗೆ ಮೊಬೈಲ್ ಕೊಂಡೊಯ್ದರೆ ಸಾಕು, ಬೇರೇನೂ ಬೇಡ. ಬೇರೆ ಖಾತೆಗೆ ಹಣ ಹಾಕಿ ಎನ್ನುವವರು ಪಾಸ್​​ಬುಕ್ ಜೆರಾಕ್ಸ್ ಕೊಡಬೇಕು.
ಯೋಜನೆಯ ಉಚಿತ ಲಾಭ ಪಡೆದುಕೊಳ್ಳಲು ಸಹಾಯವಾಣಿ 8147500500 ಸಂಖ್ಯೆಗೆ ಪಡಿತರ ಚೀಟಿ ಸಂಖ್ಯೆಯನ್ನು SMS ಮಾಡಿ. ಕೂಡಲೇ ಸ್ಥಳ, ಗೊತ್ತುಪಡಿಸಿದ ದಿನಾಂಕ, ಸಮಯ ಸಂದೇಶ ಹೋಗುತ್ತೆ. ಯಾವುದೇ ಮಧ್ಯವರ್ತಿಗಳ ಮೊರೆ ಹೋಗುವ ಅಗತ್ಯವಿಲ್ಲ. ಗೊಂದಲವಿದ್ದರೆ 1902 ನಂಬರ್​ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four + seven =
Remember me
