ಬೆಂಗಳೂರು:ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್​ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಚವೆ ಲಕ್ಷ್ಮಿ ಹೆಬ್ಬಾಳ್ಕರ್​ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್​ ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್​ ಬಳಿಕ ಮಾತನಾಡಿದ ಸಚಿವೆ ಕಾರ್ಯಕ್ರಮದ ಉದ್ಘಾಟನೆಗೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರನ್ನು ಆಹ್ವಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಪೊಲೀಸ್​ ಅಧಿಕಾರಿಯ ಸೋಗಿನಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಬೀದಿನಾಟಕ ಕಲಾವಿದ ಅರೆಸ್ಟ್​
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್​ 27ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ಈ ಸಂಬಂಧ ಎಲ್ಲಾ ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 11 ಸಾವಿರ ಕಡೆ ಯೋಜನೆಯನ್ನು ಉದ್ಘಾಟಿಸಲು ಉದ್ದೇಶಿಸಲಾಗಿದೆ.
ಪ್ರತಿ ಪಂಚಾಯಿತಿಗೆ ಒಬ್ಬರಂತೆ ನೋಡಲ್​ ಅಧಿಕಾರಿಯನ್ನು ನೇಮಿಸಲಾಗಿದೆ. ಪಕ್ಷಾತೀತವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈ ಸಂಬಂಧ ಅಧಿಕಾರಿಗಳ ಜೊತೆ ವಿಡಿಯೋ ​​ಕಾನ್ಫರೆನ್ಸ್​ ನಡೆಸಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 14 =
Remember me
