ಬೆಂಗಳೂರು: ಅಂದುಕೊಂಡ ಸಮಯಕ್ಕಿಂತ ತಡವಾಗಬಹುದು ಎಂದು ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಕೊನೆಗೂ ಜುಲೈ 1ರಂದೇ ಅನ್ನಭಾಗ್ಯ ಯೋಜನೆ ಜಾರಿಗೆ ಬರಲಿದೆ ಎಂಬುದು ಕೆಲವು ಬದಲಾವಣೆಯೊಂದಿಗೆ ಇಂದು ಮತ್ತೊಮ್ಮೆ ಘೋಷಣೆಯಾಗಿದೆ.
ಇದೀಗ ಗೃಹಲಕ್ಷ್ಮಿ ಯೋಜನೆ ವಿಳಂಬವಾಗುವ ಲಕ್ಷಣ ಗೋಚರಿಸಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರೇ ಮಾಹಿತಿ ಬಹಿರಂಗಪಡಿಸಿದ್ದಾರೆ. ಯೋಜನೆ ಸಂಬಂಧ ಇಂದು ಸಂಪುಟದಲ್ಲಿ ಚರ್ಚೆಯಾಗಿದೆ. ತಾತ್ಕಾಲಿಕವಾಗಿ ನಾನೂ ಅದೇ ದಿನಾಂಕ ಹೇಳಬಲ್ಲೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ಶಿಕ್ಷಕರು ಕೂಡಲೇ ಮೂಲಶಾಲೆಗೆ ಹಾಜರಾಗದಿದ್ದರೆ ವೇತನ ಕಡಿತ; ಸಂಬಂಧಿತ ಶಿಕ್ಷಕ ಮಾತ್ರವಲ್ಲದೆ ಬಿಇಒ-ಡಿಡಿಪಿಐ ಮೇಲೂ ಶಿಸ್ತುಕ್ರಮ
ಅರ್ಜಿಗೆ ಸಿಎಂ ಅನುಮೋದನೆ ನೀಡಿದ್ದಾರೆ. ಗೃಹಜ್ಯೋತಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸರಾಗವಾಗಿ ನಡೆಯುತ್ತಿದೆ. ಆದರೆ ನಾವು ಎಷ್ಟೇ ಅಪ್ಲಿಕೇಷನ್ ಮಾಡಿದರೂ ಸರ್ವರ್ ಒಂದೇ ಅಲ್ವಾ? ಅದೊಂದೇ ಕಾರಣಕ್ಕೆ ಗೃಹಲಕ್ಷ್ಮಿ ಸ್ವಲ್ಪ ತಡವಾಗಿದೆ. ಜು. 3ರಂದು ನಾವು ಮತ್ತೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆಗಸ್ಟ್​ನಲ್ಲಿ ಮಹಿಳೆಯರ ಖಾತೆಗೆ ಹಣ ಹಾಕುವುದಂತೂ ನಿಜ ಎಂದು ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!

ಮಕ್ಕಳ ಕಣ್ಣಿಗೆ ಕಾಡಿಗೆ ಎಷ್ಟು ಸುರಕ್ಷಿತ!; ಅಪಾಯವೇನು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:thirteen + nine =
Remember me
