ಬೆಂಗಳೂರು:ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಾಂಪ್ರದಾಯಿಕ ಕಲಾಮಂಟಪದಲ್ಲಿ ನಡೆದ ‘ನಮ್ಮೂರ ನಾಗಪಂಚಮಿ-2022’ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚಾಮುಂಡೇಶ್ವರಿ ತಾಯಿಯ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು.
ಇದನ್ನೂ ಓದಿ:ಯಾರೋ ಒಬ್ಬ ನನಗೆ ಕರೆ ಮಾಡಿ… 20ನೇ ವಯಸ್ಸಿನಲ್ಲಿ ನಡೆದ ಕಹಿ ಘಟನೆಯನ್ನು ನೆನೆದ ರೆಜಿನಾ
ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಇಂದು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು. ಅದ್ದೂರಿಯಾಗಿ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
ರಾಹುಲ್ ಗಾಂಧಿ ಅವರ ದಿನಾಂಕ ಹೊಂದಾಣಿಕೆ ದೃಷ್ಟಿಯಿಂದ ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಿಗದಿ ಪಡಿಸಲಾಗಿದೆ ಎಂದು ಸಚಿವರು ಹೇಳಿದರು.
ದೇಶದ ಎಲ್ಲ ಸಂಸ್ಥೆಗಳು ಆರ್​ಎಸ್​ಎಸ್​ ಹಿಡಿತದಲ್ಲಿವೆ: ರಾಹುಲ್​ ಗಾಂಧಿ ಗಂಭೀರ ಆರೋಪ

‘ಅವರು’ ನಿಮ್ಮ ಹೆಂಡತಿಯ ಹತ್ಯೆಗೈದು ಅಂತ್ಯಕ್ರಿಯೆ ಮಾಡಿದ್ದಾರೆ: ಸ್ನೇಹಿತನ ಕರೆಗೆ ಪತಿ ತತ್ತರ

‘ಪಪ್ಪಾ ನಾನಿನ್ನೂ ಬದುಕಿದ್ದೇನೆ’; ಅಂತ್ಯಸಂಸ್ಕಾರದ ನಂತರ ವಿಡಿಯೋ ಕರೆ ಮಾಡಿದ ಮಗಳು…ಹಾಗಾದರೆ ಆ ಮೃತದೇಹ ಯಾರದ್ದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + fifteen =
Remember me
