ಬೆಂಗಳೂರು: ಬಿಜೆಪಿ ದ್ವೇಷದ ಭಾವನೆ ಮೂಡಿಸಿ ಮತ ಕೇಳುತ್ತದೆ, ಕಾಂಗ್ರೆಸ್ ನುಡಿದಂತೆ ನಡೆದು ಜನರ ಬಳಿ ಮತ ಕೇಳುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಚಾಮರಾಜಪೇಟೆ ಕಸ್ತೂರಿ ನಗರದ ಬಿಬಿಎಂಪಿ ಜೂನಿಯರ್ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್‌ನದ್ದು ಅಭಿವೃದ್ಧಿ ಮಂತ್ರ, ಬಿಜೆಪಿ ಅವರದು ದ್ವೇಷದ ತಂತ್ರ ಎಂದು ಹೇಳಿದರು.ಚುನಾವಣೆ ಸಮಯದಲ್ಲಿ ಕಾಮಗ್ರೆಸ್ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಪೈಕಿ ನಾಲ್ಕು ಈಡೇರಿಸಿದೆ. ಇದೀಗ ಗೃಹಲಕ್ಷ್ಮಿ ಯೋಜನೆ ಮೂಲಕ 1.28 ಕೋಟಿ ಮನೆ ಯಜಮಾನಿಯರ ಖಾತೆಗೆ ತಲಾ ಎರಡು ಸಾವಿರ ಜಮೆ ಆಗಿದೆ. ಇಷ್ಟು ಕುಟುಂಬ ಗಳು ನೆಮ್ಮದಿಯ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.ಕಾಂಗ್ರೆಸ್ ಸರ್ಕಾರ ಎಂದರೆ ಬಡವರ ಪರ ಸರ್ಕಾರ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬಡವರ ಪರ ಯೋಜನೆ ರೂಪಿಸಿ ಕೆಲಸ ಮಾಡಿದೆ. ಐದು ಗ್ಯಾರಂಟಿ ಯೋಜನೆ ಗಳಿಗೆ ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದ್ದೇವೆ. ಇದು ನಮ್ಮ ಬದ್ಧತೆ ಎಂದು ಹೇಳಿದರು.ಮುಖಂಡರಾದ ಅಲ್ತಾಫ್ ಖಾನ್, ಡಿ. ಸಿ. ರಮೇಶ್, ಸುಜಾತ ರಮೇಶ್, ಸರ್ವರ್, ಗೌಸಿ, ವಿನಾಯಕ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + 17 =
Remember me
