| ಸೋರಲಮಾವು ಶ್ರೀಹರ್ಷ ತುಮಕೂರುರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಲಕ್ಷ್ಮಿ’ಯೋಜನೆ ಆ.30ರಂದು ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆಗೊಳ್ಳಲಿದ್ದು, ಕಾರ್ಯಕ್ರಮದ ನೇರಪ್ರಸಾರಕ್ಕೆ ಆಯಾ ಸ್ಥಳೀಯ ಸಂಸ್ಥೆಗಳೇ ಲಭ್ಯವಿರುವ ಅನುದಾನ ಬಳಸಿಕೊಳ್ಳಬೇಕು ಎಂಬ ಸುತ್ತೋಲೆ ಸ್ಥಳೀಯ ಆಡಳಿತದ ನಿದ್ದೆಗೆಡಿಸಿದೆ.
ರಾಜ್ಯದ ಬಹುತೇಕ ಗ್ರಾಪಂಗಳು ಆರ್ಥಿಕವಾಗಿ ಶಕ್ತಿಹೀನವಾಗಿದ್ದು, ಕನಿಷ್ಠ 250 ಜನರನ್ನು ಸೇರಿಸಿ ಕಾರ್ಯಕ್ರಮ ಆಯೋಜಿಸುವುದು ಆರ್ಥಿಕ ಹೊರೆ ತಂದೊಡ್ಡುತ್ತಿದೆ. ಹಾಗಾಗಿ, ಕಾರ್ಯಕ್ರಮ ಆಯೋಜಿಸಲು ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ರಾಜ್ಯ ಗ್ರಾಪಂ ಸದಸ್ಯರ ಮಹಾ ಒಕ್ಕೂಟ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​ಖರ್ಗೆ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.
ಕಾರ್ಯಕ್ರಮ ಆಯೋಜಿಸುವ ಸ್ಥಳದಲ್ಲಿ ಒಂದು ಟಿವಿ ಮತ್ತು ಕನಿಷ್ಠ 10/10 ಅಳತೆಯ ಎಲ್​ಇಡಿ ಪರದೆಯನ್ನು ಅಳವಡಿಸಿ ಅದರ ಮೂಲಕ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ ಕಾರ್ಯರೂಪಕ್ಕೆ ಬರುತ್ತಿರುವ ಕಾರ್ಯಕ್ರಮಕ್ಕೂ ಆರ್​ಡಿಪಿಆರ್, ನಗರಾಭಿವೃದ್ಧಿ ಇಲಾಖೆ ಅಧೀನದಲ್ಲಿರುವ ಸ್ಥಳೀಯ ಸರ್ಕಾರಗಳಿಗೆ ಸೂಚನೆ ನೀಡಿರುವುದು ಹಾಗೂ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ವರದಿ ನೀಡಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚಿಸಿರುವಂತೆ 250 ಫಲಾನುಭವಿಗಳನ್ನು ಒಂದೆಡೆ ಸೇರಿಸಿ ಕಾರ್ಯಕ್ರಮ ಆಯೋಜನೆ ಮಾಡಿದರೆ ಕನಿಷ್ಠ 50 ಸಾವಿರ ರೂ. ಖರ್ಚಾಗಲಿದ್ದು, ಇದನ್ನು ಯಾರು ಒದಗಿಸಬೇಕು ಎಂಬ ಬಗ್ಗೆ ಹಗ್ಗಜಗ್ಗಾಟ ನಡೆದಿದೆ. ಸರ್ಕಾರ ಜಿಪಂ ಸಿಇಒ ಮೂಲಕ ಪಿಡಿಒಗಳು ಸೂಚನೆ ನೀಡಿದೆಯಾದರೂ ಹಣ ನೀಡ ಸ್ಥಳೀಯ ಗ್ರಾಪಂ ಆಡಳಿತಗಳು ಹಿಂದೇಟು ಹಾಕಿರುವುದು ಪಿಡಿಒಗಳಿಗೆ ಸಂಕಷ್ಟ ತಂದೊಡ್ಡಿದೆ. ಎಲ್ಲ ಗ್ರಾಪಂಗಳಿಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಕಾರ್ಯಕ್ರಮ ಯಶಸ್ಸಿಗೆ ಸರ್ಕಾರದ ಕಾರ್ಯಕ್ರಮಕ್ಕೆ ವಿಶೇಷ ಅನುದಾನ ನೀಡಬೇಕು ಎಂದು ಗ್ರಾಪಂ ಸದಸ್ಯರು ಆಗ್ರಹಿಸಿದ್ದಾರೆ.
ರಾಜ್ಯದ ಬಹುತೇಕ ಗ್ರಾಪಂಗಳಲ್ಲಿ ಸಿಬ್ಬಂದಿಗೆ ವೇತನ ನೀಡಲು ಹಣವಿಲ್ಲದ ಪರಿಸ್ಥಿತಿಯಿದೆ, ಇಂತಹ ಕಡೆಗಳಲ್ಲಿಯೂ ಸರ್ಕಾರದ ಕಾರ್ಯಕ್ರಮದ ನೇರ ಪ್ರಸಾರಕ್ಕೆ ಎಲ್ಲಿಂದ ಹಣ ಒದಗಿಸುವುದು. ಹಾಗಾಗಿ, ಈ ಕಾರ್ಯಕ್ರಮಕ್ಕೆ ಸರ್ಕಾರವೇ ಅನುದಾನ ಒದಗಿಸಬೇಕು.
| ಕಾಡಶೆಟ್ಟಿಹಳ್ಳಿ ಸತೀಶ್, ಅಧ್ಯಕ್ಷ, ಗ್ರಾಪಂ ಸದಸ್ಯರ ಮಹಾ ಒಕ್ಕೂಟ
ಒಬ್ಬ ಮಗನಿದ್ರೂ ಮತ್ತೆ ಗಂಡು ಮಗುವಾಗಿಲ್ಲ ಅಂತ ಮಕ್ಕಳ ಸಹಿತ ಬಾವಿಗೆ ಹಾರಿದ್ಲು; ಮೂವರು ಮಕ್ಕಳೂ ಸಾವು, ತಾಯಿ ಬಚಾವ್!

100 ಕೋಟಿ ರೂ. ಚೆಕ್​ ದೇಣಿಗೆಯಾಗಿ ಕೊಟ್ಟ ಭಕ್ತ; ಆಮೇಲಿನ ಸಂಗತಿ ಮೂಡಿಸಿತು ಅಚ್ಚರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 19 =
Remember me
