ಬೆಂಗಳೂರು:ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ ಮನೆಯ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ’ ಯೋಜನೆಗೆ ಬುಧವಾರ ಚಾಲನೆ ನೀಡಲಾಗುತ್ತಿದೆ. ಅದರೊಂದಿಗೆ ನಾಲ್ಕನೇ ಗ್ಯಾರಂಟಿ ಅನುಷ್ಠಾನವಾದಂತಾಗಲಿದೆ.
ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಚುನಾವಣೆಯಲ್ಲಿ ನೀಡಿತ್ತು. ಅದರಲ್ಲಿ ಶಕ್ತಿ ಯೋಜನೆ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿಯ ಬದಲು ಹಣ ಖಾತೆಗಳಿಗೆ ಜಮಾ ಆಗುತ್ತಿದೆ. ಗೃಹಜ್ಯೋತಿಯ ನೋಂದಣಿ ಒಂದು ಕೋಟಿ ದಾಟಿದೆ. ಇದೀಗ ಬುಧವಾರ ಗೃಹಲಕ್ಷ್ಮಿ ಜಾರಿಗೆ ಬರುತ್ತಿದೆ. ‘ಯುವನಿಧಿ’ಯೊಂದು ಮಾತ್ರ ತಡವಾಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಸಂಜೆ 5ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ನೀಡಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಯೋಜನೆಯ ಲಾಂಛನ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಉಪಸ್ಥಿತರಿರುವರು.
ಗೃಹಲಕ್ಷ್ಮೀ ಯೋಜನೆಗೆ ಬುಧವಾರ ನೋಂದಣಿ ಆರಂಭವಾಗುತ್ತದೆ. ಆ.15ಕ್ಕೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಆಗಲಿದೆ. ರೇಷನ್ ಕಾರ್ಡ್​ನಲ್ಲಿ ಮನೆಯ ಯಜಮಾನಿಯಾಗಿರುವವರು ಯೋಜನೆಯ ಫಲಾನುಭವಿಯಾಗಲಿದ್ದಾರೆ. ಅವರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು. ಅವರ ಪತಿಯ ಆಧಾರ್ ಕಾರ್ಡ್ ನೀಡಬೇಕು. ಜಿಎಸ್​ಟಿ ಹಾಗೂ ಆದಾಯ ತೆರಿಗೆ ಪಾವತಿದಾರರ ಪತ್ನಿಯರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಗ್ರಾಪಂಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಇದೆ. ಸರ್ಕಾರ ನೇಮಕ ಮಾಡಿರುವ ಪ್ರಜಾಪ್ರತಿನಿಧಿಗಳು ಮನೆ ಬಾಗಿಲಿಗೆ ಬಂದು ನೋಂದಣಿ ಮಾಡಲಿದ್ದಾರೆ. ಯೋಜನೆ ಜಾರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಜತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಡಿಯೋ ಸಂವಾದ ನಡೆಸಿ ಕೆಲ ಸೂಚನೆ ನೀಡಿದ್ದಾರೆ.
ನಕಲಿ ಅರ್ಜಿಗಳ ಬಗ್ಗೆ ಎಚ್ಚರ:ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ನಮೂನೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
* ಗೃಹಲಕ್ಷ್ಮೀ ನೋಂದಣಿ ಮಾಡುವ ಕೇಂದ್ರಗಳ ಮೇಲ್ವಿಚಾರಣೆಗೆ ಸರ್ಕಾರಿ ಅಧಿಕಾರಿ/ಸಿಬ್ಬಂದಿ ನಿಯೋಜನೆ
* ಕೇಂದ್ರಗಳಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಪೊಲೀಸರ ನೇಮಕ
* ವಿದ್ಯುತ್ ಕೈಕೊಟ್ಟರೆ ನೋಂದಣಿಗೆ ತೊಂದರೆಯಾಗದಂತೆ ಬ್ಯಾಟರಿ ಬ್ಯಾಕ್​ಅಪ್ ಹಾಗೂ ಸುಸ್ಥಿತಿಯಲ್ಲಿರುವ ಪ್ರಿಂಟರ್ ನೀಡುವುದು.
* ಪ್ರತಿ ತಾಲೂಕಿನಲ್ಲಿ ಹೆಲ್ಪ್​ಡೆಸ್ಕ್ ಸ್ಥಾಪನೆ
* ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಜಾಪ್ರತಿನಿಧಿಗಳ ಪಟ್ಟಿ ಪಡೆದು ನೋಂದಣಿ ಮಾಡಿಸಿ ತರಬೇತಿ ನೀಡಬೇಕು.
* ನೋಂದಣಿ ಕೇಂದ್ರದಲ್ಲಿ ಮಳೆಯಿಂದ ರಕ್ಷಿಸಲು ಸೂಕ್ತ ರಕ್ಷಣೆ
* ನೋಡಲ್ ಅಧಿಕಾರಿಗಳ ವಿವರಗಳನ್ನು ಇ-ಆಡಳಿತ ಇಲಾಖೆಯ ಲಿಂಕ್​ನಲ್ಲಿ ಅಪ್​ಲೋಡ್ ಮಾಡುವುದು.
ಬೆಂಗಳೂರು:ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಮೂರು ಜ್ಯೋತಿ ಯೋಜನೆಗಳನ್ನು ಗೃಹ ಜ್ಯೋತಿ ಯೋಜನೆಯಲ್ಲಿ ವಿಲೀನ ಮಾಡಿದೆ. ಇದರೊಂದಿಗೆ 50 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಗೃಹಜೋತಿಯ ಲಾಭ ದಕ್ಕಲಿದೆ.
ಗೃಹ ಜ್ಯೋತಿ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್​ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಜುಲೈ 1ರಿಂದಲೇ ಈ ಯೋಜನೆ ಜಾರಿಗೆ ಬಂದಿದೆ. ಆದರೆ, ಈಗಾಗಲೇ ಜಾರಿಯಲ್ಲಿರುವ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳ ಫಲಾನುಭವಿಗಳ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ವಿಶೇಷ ಕಾಳಜಿ ವಹಿಸಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಅದರಂತೆ, ಭಾಗ್ಯ ಜ್ಯೋತಿ, ಕುಟುಂಬ ಜ್ಯೋತಿಗೆ ಈವರೆಗೆ 40 ಯೂನಿಟ್ ಫ್ರೀ ಇತ್ತು. ಈಗ ಅದನ್ನು 53 ಯೂನಿಟ್ ಹಾಗೂ ಶೇ.10 ಹೆಚ್ಚುವರಿ ಫ್ರೀ ಕರೆಂಟ್ ನೀಡುವುದಾಗಿ ಘೊಷಿಸಿದೆ. ಹಾಗೆಯೇ ಅಮೃತ ಜ್ಯೋತಿಗೆ 75 ಯೂನಿಟ್ ಇತ್ತು. ಈಗ ಅದನ್ನು 75 ಯೂನಿಟ್ ಜತೆಗೆ ಶೇ.10 ಹೆಚ್ಚುವರಿ ಮಾಡಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − seven =
Remember me
