ಮೈಸೂರು:ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಗೊತ್ತಿಲ್ಲ, ಅವರು ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಶಾಸಕ ಜಿ.ಟಿ. ದೇವೇಗೌಡ ಇಂದು ಮೈಸೂರಿನಲ್ಲಿ ಹೇಳಿದರು.
ಇದನ್ನೂ ಓದಿ:ಕಾಂಗ್ರೆಸ್​ ವಿರುದ್ಧ ಏಕನಾಥ್​ ಶಿಂಧೆ ಭವಿಷ್ಯ; ಜಗದೀಶ್​ ಶೆಟ್ಟರ್​ ಏನಂದ್ರು?
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಪ್ರಜ್ಚಲ್ ರೇವಣ್ಣ ಪತ್ತೆಗೆ ರಾಜ್ಯ ಸರ್ಕಾರ ಬ್ಲೂ ಕಾರ್ನರ್ ನೋಟಿಸ್ ನೀಡಿದೆ. ಎಸ್​ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಈ ಪ್ರಕರಣವನ್ನು ಸಿಬಿಐ ವಹಿಸಲ್ಲ ಎಂದು ಹೇಳಿದ್ದಾರೆ. ನಾವು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಬಂಧಿಸಿದ್ದರ ವಿರುದ್ಧ ಪ್ರತಿಭಟನೆ ಮಾಡಿದ್ದೆವು” ಎಂದರು.
“ಪ್ರಜ್ವಲ್ ರೇವಣ್ಣ ಪರವಾಗಿ ನಾವು ಪ್ರತಿಭಟನೆ ಮಾಡಿಲ್ಲ. ತಮಿಳುನಾಡು ಸೇರಿದಂತೆ ಇತರೆ ಕಡೆ ಪೆನ್ ಡ್ರೈವ್ ತಯಾರಿಸಿದ್ದರು ಅಂತ ಮಾಹಿತಿ ಇದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ಕೊಡಿ ಅಂತ ಹೇಳಿದ್ದೇವೆ. ಆದರೆ ಪ್ರಕರಣವನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ಮಾಡಿ ಸತ್ಯಾಸತ್ಯತೆ ಬಯಲಿಗೆ ತರುತ್ತಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗುವುದು ಖಚಿತ” ಎಂದರು.
ಇದನ್ನೂ ಓದಿ:ಇದೇ ಕಡೆ, ಮುಂದೆ ನಾನು ಕಾಣಿಸಿಕೊಳ್ಳಲ್ಲ; ನಿವೃತ್ತಿ ಘೋಷಿಸಿದ ಫುಟ್​ಬಾಲ್ ದಿಗ್ಗಜ ಸುನಿಲ್ ಚೇತ್ರಿ
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಟಿಕೆಟ್ ಗೊಂದಲ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, “ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀಕಂಠೇಗೌಡ ಜನತಾ ಪಕ್ಷದ ಕಟ್ಟಾಳು. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಅಪ್ಪಟ ಶಿಷ್ಯ. ಶ್ರೀಕಂಠೇಗೌಡರ ಮುಂದಾಳತ್ವದಲ್ಲಿಯೇ ಈ ಚುನಾವಣೆ ನಡೆಯತ್ತದೆ. ಈ ಬಗ್ಗೆ ಯಾರು ಅನುಮಾನ ಪಡುವ ಅಗತ್ಯವಿಲ್ಲ” ಎಂದರು.
ಒಮ್ಮೆ ಹೋದ್ರೆ ಮತ್ತೆ ನೀವು ನನ್ನ ನೋಡೋದು ಡೌಟ್​; ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು, ಫ್ಯಾನ್ಸ್​ ಶಾಕ್!

ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
