| ಮಂಜುನಾಥ ಕೋಳಿಗುಡ್ಡ ಬೆಳಗಾವಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಬೃಹತ್ ಸಮಾವೇಶ, ಸಿಎಂ ಸಿದ್ದರಾಮಯ್ಯ ಪ್ರಜಾಧ್ವನಿ ಕಾರ್ಯಕ್ರಮದ ಬಳಿಕ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದ ಕಾರ್ಯವೈಖರಿಯೇ ಬದಲಾಗಿದೆ. ಬಿಜೆಪಿ ಸತತ ಆರನೇ ಬಾರಿ ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ಬರೆಯುವ ತವಕದಲ್ಲಿದ್ದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮ ಪುತ್ರನನ್ನು ಗೆಲ್ಲಿಸಿಕೊಳ್ಳಲು ಶತಪ್ರಯತ್ನ ನಡೆಸಿದ್ದಾರೆ.
ಕಾಂಗ್ರೆಸ್​ನಿಂದ ವಾಪಸ್ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ ಸ್ಪರ್ಧೆ ಕಾರಣಕ್ಕೆ ಬೆಳಗಾವಿ ಲೋಕಸಭಾ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ. ಹಿರಿಯ, ಮುತ್ಸದ್ದಿ ರಾಜಕಾರಣಿ ಎದುರು ಯುವ ನಾಯಕ ಸ್ಪರ್ಧೆಗಿಳಿದಿರುವುದು ಕ್ಷೇತ್ರದಲ್ಲಿ ಕುತೂಹಲ ಉಂಟುಮಾಡಿದೆ.
2004ರಿಂದ ನಿರಂತರ ಗೆಲುವು ಸಾಧಿಸಿಕೊಂಡು ಬಂದಿರುವ ಬಿಜೆಪಿ ಬೆಳಗಾವಿ ಕ್ಷೇತ್ರವನ್ನು ತನ್ನ ಭದ್ರಕೋಟೆಯನ್ನಾಗಿ ಮಾಡಿಕೊಂಡಿದೆ. ದಿ. ಸುರೇಶ ಅಂಗಡಿ ಸತತ ನಾಲ್ಕು ಸಲ ಗೆದ್ದು ಒಮ್ಮೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾಗಿದ್ದರು. ಅವರ ಅಕಾಲಿಕ ನಿಧನದ ಬಳಿಕ ಅವರ ಪತ್ನಿ ಮಂಗಲ ಅಂಗಡಿ 2021ರ ಉಪಚುನಾವಣೆಯಲ್ಲಿ ಕಾಂಗ್ರೆಸ್​ನ ಸತೀಶ ಜಾರಕಿಹೊಳಿ ಎದುರು ಗೆದ್ದು ಕ್ಷೇತ್ರ ಉಳಿಸಿಕೊಂಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ಮೂರು ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಆರು ಕ್ಷೇತ್ರಗಳನ್ನು ವಶದಲ್ಲಿಟ್ಟುಕೊಂಡಿದ್ದರೆ, ಕಾಂಗ್ರೆಸ್ ಬೈಲಹೊಂಗಲ ಮತ್ತು ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೇಲೆ ಹಿಡಿತ ಹೊಂದಿತ್ತು.
ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅಂಗಡಿ ಕುಟುಂಬದ ಬೀಗರು. ಹೀಗಾಗಿ, ಸಂಸದೆ ಮಂಗಲ ಅಂಗಡಿ ಯಾವುದೇ ತಕರಾರಿಲ್ಲದೆ ಕ್ಷೇತ್ರ ಬಿಟ್ಟುಕೊಟ್ಟರು. ಬಿಜೆಪಿಯ ಮತಬ್ಯಾಂಕ್, ಪ್ರಧಾನಿ ಮೋದಿ ಮೇನಿಯಾ, ರಾಮ ಮಂದಿರ, ಹಿಂದುತ್ವ ಹೀಗೆ ಹಲವು ವಿಷಯಗಳ ಜತೆಗೆ ಮುಖ್ಯಮಂತ್ರಿಯಾಗಿ, ಎರಡು ಅವಧಿಗೆ ಶೆಟ್ಟರ್ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಂದರ್ಭದಲ್ಲಿ ಮಾಡಿರುವ ಕೆಲಸ ಮುಂದಿಟ್ಟುಕೊಂಡು ಪ್ರಚಾರ ನಡೆಸಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ್ ಅವರಿಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮಾಡಿದ ಸಾಧನೆ, ಐದು ಕ್ಷೇತ್ರಗಳಲ್ಲಿ ಶಾಸಕರ ಬಲ, ಪಕ್ಷದ ಮುಖಂಡರು ಒಗ್ಗಟ್ಟಾಗಿರುವುದು ಗೆಲುವಿನ ವಿಶ್ವಾಸ ಹೆಚ್ಚಿಸಿದೆ. ಒಟ್ಟಿನಲ್ಲಿ ಕ್ಷೇತ್ರದಲ್ಲಿ ಮೇಲ್ನೋಟಕ್ಕೆ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಫೈಟ್ ಎದುರಾಗಿದೆ. ಆದರೆ, ಹೊಂದಾಣಿಕೆ ರಾಜಕಾರಣ, ಒಳ ಏಟು ಇಬ್ಬರೂ ಅಭ್ಯರ್ಥಿಗಳನ್ನು ಆತಂಕಕ್ಕೆ ತಳ್ಳಿದೆ.
ಲಿಂಗಾಯತ, ಮರಾಠಿಗರ ಬೆಂಬಲಕ್ಕೆ ಹರಸಾಹಸ!:2019ರ ಲೋಕಸಭೆ ಚುನಾವಣೆ, 2021ರ ಉಪ ಚುನಾವಣೆಯಲ್ಲಿ ಲಿಂಗಾಯತ, ಮರಾಠಿಗರು ಕೈ ಹಿಡಿದಿದ್ದರಿಂದ ಬಿಜೆಪಿ ಗೆಲುವು ಸಾಧಿಸಿತು. ಆದರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದಿಂದ ಲಿಂಗಾಯತ ಸಮುದಾಯ ಕಾಂಗ್ರೆಸ್​ನತ್ತ ವಾಲಿದ್ದು, ಬಿಜೆಪಿ ಸೋಲಬೇಕಾಯಿತು. ಲೋಕಸಭೆ ಬೇರೆ, ವಿಧಾನಸಭೆ ಚುನಾವಣೆಯೇ ಬೇರೆ. ಈ ಬಾರಿ ಲಿಂಗಾಯತ, ಮರಾಠಿಗರು ಕೈ ಹಿಡಿಯುವ ವಿಶ್ವಾಸವನ್ನು ಬಿಜೆಪಿ ಹೊಂದಿದ್ದರೆ, ಪಂಚಮಸಾಲಿ, ಅಹಿಂದ ವರ್ಗದ ಬೆಂಬಲ ಸಿಗುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.
ಕ್ಷೇತ್ರಗಳಿಗೆ ಸೀಮಿತವಾದ ಶಾಸಕರು:ಆಡಳಿತಾರೂಢ ಕಾಂಗ್ರೆಸ್ ಪಂಚ ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸದಲ್ಲಿದೆ. ಆದರೆ ಕ್ಷೇತ್ರದಲ್ಲಿ ವಸ್ತುಸ್ಥಿತಿ ಬೇರೆ ಇದೆ. ಕಾಂಗ್ರೆಸ್ ಐದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹೊರತುಪಡಿಸಿದರೆ ಇನ್ನುಳಿದ ಶಾಸಕರು ತಮ್ಮತಮ್ಮ ಕ್ಷೇತ್ರ ಬಿಟ್ಟು ಹೊರಬಾರದೆ ಒಂದೇ ಕಡೆ ಸೀಮಿತರಾಗಿದ್ದಾರೆ. ಪಕ್ಷದ ಸ್ಥಳೀಯ ಮಟ್ಟದ ನಾಯಕರು ಪೂರ್ಣಪ್ರಮಾಣದಲ್ಲಿ ಪ್ರಚಾರದಲ್ಲಿ ತೊಡಗಿಸಿಕೊಂಡಿಲ್ಲ. ಸಭೆ, ಸಮಾರಂಭಗಳ ಆಯೋಜನೆ, ಪ್ರಚಾರ ಎಲ್ಲದಕ್ಕೂ ಸಚಿವರೇ ಬರುವ ಸ್ಥಿತಿ ನಿರ್ವಣವಾಗಿದೆ. ಇದು ಸಾಮಾನ್ಯ ಕಾರ್ಯಕರ್ತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಕಾಂಗ್ರೆಸ್ ನಾಯಕರ ಅಂತರ: ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ್ ಪರ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹೊರತು ಪಡಿಸಿದರೆ ಪ್ರಭಾವಿ ನಾಯಕರು ಯಾರೂ ಪ್ರಚಾರ ಕೈಗೊಂಡಿಲ್ಲ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಬಾರದಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ವಿಶ್ವಾಸ ಕುಗ್ಗುವಂತೆ ಮಾಡಿದೆ. ಅಲ್ಲದೆ, ಕಾಂಗ್ರೆಸ್​ನ ಕೆಲ ಪ್ರಭಾವಿ ನಾಯಕರು, ಶಾಸಕರು ಪ್ರಚಾರಕ್ಕೆ ಬಾರದೆ ಅಂತರ ಕಾಯ್ದುಕೊಂಡಿರುವುದು ಅಭ್ಯರ್ಥಿಗೆ ಆತಂಕ ಸೃಷ್ಟಿಸಿದೆ.
ಬಿಜೆಪಿಗೆ ವರಿಷ್ಠರ ಬಲ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಾಯಕರು ಪ್ರಚಾರ ಕೈಗೊಂಡಿರುವುದು ಬಿಜೆಪಿ ಗೆಲುವಿನ ಬಲ ಹೆಚ್ಚಿಸಿದೆ.
ಮತಾಂತರ, ನೇಹಾ ಪ್ರಕರಣ ಬಿಜೆಪಿಗೆ ಲಾಭ?:ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಆರೋಪಿ ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದವನಾಗಿದ್ದು, ಬಿಜೆಪಿ, ಹಿಂದುಪರ ಸಂಘಟನೆಗಳು, ಜಂಗಮ ಸಂಘಟನೆಗಳು ಮುನವಳ್ಳಿ ಪಟ್ಟಣದಲ್ಲಿ ಮೂರು ದಿನ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದವು. ಇದೇ ಪಟ್ಟಣದಲ್ಲಿ ಮುಸ್ಲಿಂ ವ್ಯಕ್ತಿಯೋರ್ವ ದಲಿತ ಮಹಿಳೆಯನ್ನು ಮತಾಂತರಗೊಳಿಸಲು ಯತ್ನಿಸಿರುವ ಪ್ರಕರಣ ಬಿಜೆಪಿಗೆ ಲಾಭ ತಂದುಕೊಡುವ ಸಾಧ್ಯತೆ ಇದೆ.
ಕಾಂಗ್ರೆಸ್‌ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಪ್ರಚಾರದಲ್ಲಿ ಭಾಗವಹಿಸದಂತೆ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
