ಬೆಂಗಳೂರು:ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಗ್ಯಾರಂಟಿಗಳಿಂದ ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು, ಕೊಳ್ಳುವ ಶಕ್ತಿ ಇದೆ. ಇಲ್ಲದಿದ್ದರೆ ಹಾಹಾಕಾರ ಶುರುವಾಗುತ್ತಿತ್ತು. ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ ಎಂದರು.
ರಾಜ್ಯ ದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕಿದೆ. ಸಂವಿಧಾನ ಅರಿತು ಅದರಂತೆ ನಡೆಯಬೇಕಿದೆ. ಈ ದಿಕ್ಕಿನಲ್ಲಿ ಪ್ರಯತ್ನ ಮಾಡೋಣ ಎಂದು ತಿಳಿಸಿದರು.
ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024 ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60 ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ.
ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಮೌಲ್ಯದ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024 ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸರ್ಕಾರದ ಅಭಿವೃದ್ಧಿ ಆಯುಕ್ತ ರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಬರೆದಿರುವ ‘ಸುಸ್ಥಿರ ಬದುಕಿನ ಸುತ್ತ ಆಶಾಕಿರಣ’ ಪುಸ್ತಕವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಜೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 7 =
Remember me
