ಮಂಡ್ಯ:ಲಾಕ್‌ಡೌನ್ ಅವಧಿಯ ವೇತನ ಬಿಡುಗಡೆ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಲಾಕ್‌ಡೌನ್ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಕುಟುಂಬಗಳು ಸಂಕಷ್ಟದಲ್ಲಿರುವುದರ ಬಗ್ಗೆ ಅರಿತು ವೇತನ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಸೂಚಿಸಿದ್ದಾರೆ. ಆದರೆ ಸೂಚನೆ ನೀಡಿ ತಿಂಗಳು ಕಳೆಯುತ್ತಾ ಬಂದರೂ ಬಿಡುಗಡೆ ಮಾಡಿಲ್ಲ. ಅಲ್ಲದೆ, ಈಗಾಗಲೇ 8 ತಿಂಗಳಿನಿಂದ ವೇತನ ಇಲ್ಲದೆ ಅತಿಥಿ ಉಪನ್ಯಾಸಕರ ಕುಟುಂಬಗಳು ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಮಿತಿಯ ಗೌರವಾಧ್ಯಕ್ಷ ಜಿ.ಎಸ್.ನಾಗರಾಜು, ಅರವಿಂದ್, ಮಹೇಶ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + twelve =
Remember me
