ಗದಗ:ನರಗುಂದ ತಾಲೂಕಿನ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿಯನ್ನು ಹತ್ಯೆಗೈದು ಇಬ್ಬರು ಶಿಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮೃತ ಬಾಲಕನ ತಾಯಿ, ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಅವರು ಚಿಕಿತ್ಸೆ ಫಲಿಸದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು(ಗುರುವಾರ) ಮೃತಪಟ್ಟಿದ್ದಾರೆ.
ಕೊಲೆ ಆರೋಪಿ ಹದಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿಯನ್ನು ಪೊಲೀಸರು ಮೊನ್ನೆ(ಡಿ.20) ಬಂಧಿಸಿದ್ದಾರೆ. ಗೀತಾ ಬಾರಕೇರ್ ಕೂಡ ಇದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಗೀತಾ ಬಾರಕೇರ ಪುತ್ರ ಭರತ್​ ಬಾರಕೇರ ಅದೇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಡಿ.19ರಂದು ಶಾಲಾ ಆವರಣದಲ್ಲೇ ಬಾಲಕನನ್ನು ಕೊಂದು ಗೀತಾ ಬಾರಕೇರ ಮತ್ತು ಸಹ ಶಿಕ್ಷಕ ಸಂಗನಗೌಡ ಪಾಟೀಲ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗೀತಾರನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಚಿಕಿತ್ಸೆ ಫಲಿಸಿದೆ ಗುರುವಾರ ಕೊನೆಯುಸಿರೆಳೆದಿದ್ದಾರೆ. ಸಂಗನಗೌಡ ಪಾಟೀಲ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ವಿದ್ಯಾರ್ಥಿ ಹಂತಕನ ಬಂಧನ: ಶಿಕ್ಷಕಿ ಮೇಲಿನ ಅತಿರೇಕದ ಪ್ರೇಮವೇ ಕೊಲೆಗೆ ಕಾರಣ? ವಾಟ್ಸ್​ಆ್ಯಪ್​ನಲ್ಲಿದೆ ರಹಸ್ಯ…

ಬಾಳಿ ಬದುಕಬೇಕಿದ್ದ ಮಗ-ಸೊಸೆ ಜತೆ ಸಾವಿನ ಮನೆಯ ಕದ ತಟ್ಟಿದ ತಾಯಿ! ಕಿರಿ ಮಗನ ತಪ್ಪಿಗೆ ನಡೆದೇ ಹೋಯ್ತು ಘೋರ ದುರಂತ

ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯಲ್ಲಿ ಕೊಲೆಯಾಗಿ ಬಿದ್ದಿದ್ದ ಪತಿ, ಅಪ್ಪನ‌ ಶವ ಕಂಡು ಬೆಚ್ಚಿಬಿದ್ದ ಮಗಳು… ಕೊಳ್ಳೇಗಾಲದಲ್ಲಿ ಭೀಕರ ಘಟನೆ

ಇಮ್ರಾನ್ ಖಾನ್ ಆಡಿಯೋ ಲೀಕ್​: ನಿಮ್ಮಿಂದಾಗಿ ನನ್ನ ಖಾಸಗಿ ಅಂಗಗಳು ನೋಯುತ್ತಿವೆ.. ಇಂದು ಬರೋಕೆ ಆಗಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 8 =
Remember me
