ಬೆಂಗಳೂರು:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಈಗಾಗಲೇ ಅಧಿಕೃತ ಆದೇಶ ಹೊರಬಿದ್ದಿದೆ. ಮಹಿಳೆಯರ ಜತೆಗೆ ತೃತೀಯ ಲಿಂಗಿಗಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ‘ಶಕ್ತಿ ಯೋಜನೆಯ’ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಮುಂದಿನ ಮೂರು ತಿಂಗಳೊಳಗೆ ಉಚಿತ ಸೌಲಭ್ಯ ಪಡೆಯುವ ಎಲ್ಲಾ ಮಹಿಳೆಯರಿಗೆ ಸರ್ಕಾರದಿಂದ ಶಕ್ತಿ ಸ್ಮಾರ್ಟ್‌ ಕಾರ್ಡ್‌ ವಿತರಿಸಲಾಗುತ್ತದೆ. ಈ ಕಾರ್ಡ್ ಹೊಂದಿದ್ದರೆ ಮಾತ್ರ ಉಚಿತವಾಗಿ ಸರ್ಕಾರಿ ಬಸ್​ನಲ್ಲಿ ಮಹಿಳೆಯರು ಪ್ರಯಾಣಸಬಹುದಾಗಿದೆ.
ಇದನ್ನೂ ಓದಿ:1.6 ಕೋಟಿ ರೂ. ತೆರಿಗೆ ಪಾವತಿಸುವಂತೆ 23 ಬಾರಿ ನೋಟಿಸ್‌; ಕಂಗಾಲಾದ ರೈತ!
ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದಿರುವ ರಾಜ್ಯದ ಎಲ್ಲಾ ಮಹಿಳೆಯರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ ಬಸ್ ಮತ್ತು ಐಷಾರಾಮಿ ಬಸ್‌ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ, ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ಕಾಂಗ್ರೆಸ್​ನ ಗ್ಯಾರಂಟಿ ಯೋಜನೆಗಳನ್ನು ಲಘುವಾಗಿ ಪರಿಗಣಿಸಿ ಯಾಮಾರಿದೆವು: ಪ್ರತಾಪ್ ಸಿಂಹ
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು ಸಾರ್ವಜನಿಕರು ಸಂಬಂಧಪಟ್ಟ ಸಾರಿಗೆ ಇಲಾಖೆಗೆ ಸಲ್ಲಿಸಬೇಕು. ಅಂತೆಯೇ ನಿಗಮಗಳು ಶಕ್ತಿ ಸ್ಮಾರ್ಟ್ ಕಾರ್ಡ್​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಸರ್ಕಾರವು ಆದೇಶದಲ್ಲಿ ಸಾರಿಗೆ ನಿಗಮಗಳಿಗೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fourteen =
Remember me
