ಬೆಂಗಳೂರು:ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯಲು ಕ್ರಿಸ್​ಮಸ್​ ಹಾಗೂ ಹೊಸ ವರ್ಷ ಆಚರಣೆ ಸಂದರ್ಭ ಜನರು ಪಾಲಿಸಬೇಕಾದ ಎಚ್ಚರಿಕೆ ಕ್ರಮಗಳ ಕುರಿತು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಡಿ.30ರಿಂದ 2021ರ ಜ.2ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ ಆದೇಶ ಹೊರಡಿ ಸಿದೆ. ಆಚರಣೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು ಅವಕಾಶ ನೀಡಲಾಗಿದ್ದು, ಕರೊನಾ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕ್ರಿಸ್​ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಯನ್ನು ಸರಳ ಮತ್ತು ಅರ್ಥಗರ್ಭಿತವಾಗಿ ಆಚರಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ರಾಜ್ಯದಲ್ಲಿ ಗುರುವಾರ 1,497 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 8.78ಲಕ್ಷಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 15,205ಕ್ಕೆ ಇಳಿಕೆಯಾಗಿದೆ. ಹೊಸದಾಗಿ 1,236 ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 9.05 ಲಕ್ಷಕ್ಕೆರಿದೆ. ಚಿಕಿತ್ಸೆ ಫಲಿಸದೆ 10 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 11,981 ತಲುಪಿದೆ. ಸೋಂಕಿತರಲ್ಲಿ 229 ಮಂದಿ ಗಂಭೀರ ಸಮಸ್ಯೆಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − four =
Remember me
