ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಸಂಜೆ ಆದೇಶ ಹೊರಡಿಸಿದೆ.
ಕಲಬುರಗಿ ಜಿಲ್ಲೆಯಲ್ಲಿ ಕರೊನಾ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆಯೂ 5ಕ್ಕೆ ತಲುಪಿದೆ. ನಿಯಂತ್ರಣ ಸಾಧ್ಯವಾಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವರ್ಗಾವಣೆಯಾಗಿದೆ ಎಂದು ಹೇಳಲಾಗುತ್ತಿದೆ.
ಆರಂಭದಲ್ಲಿಯೇ ಕ್ವಾರಂಟೈನ್ ಸೇರಿ ಯಾವುದೇ ಮುನ್ನೆಚ್ಚರಿಕೆ ತೆಗೆದುಕೊಳ್ಳದೆ ಇರುವುದೇ ಸೋಂಕು ಹೆಚ್ಚಳಕ್ಕೆ ಕಾರಣವೆಂದು ಅಭಿಪ್ರಾಯಪಡಲಾಗುತ್ತಿದೆ. ಮಾರುಕಟ್ಟೆ ಆರಂಭಿಸಿದ್ದು, ರೋಗಿಗಳನ್ನು ಹೈದರಾಬಾದ್‌ಗೆ ಕಳುಹಿಸಿದ್ದು… ಹೀಗೆ ಅನೇಕ ವಿಚಾರಗಳಲ್ಲಿ ಸಾಕಷ್ಟು ತಪ್ಪುಗಳಾಗಿವೆ ಎಂದು ಸರ್ಕಾರದ ಮೂಲಗಳು ಹೇಳುತ್ತವೆ.
ಶರತ್ ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕರ ಹುದ್ದೆಗೆ ವರ್ಗ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಸುರಲ್‌ಕರ್ ವಿಕಾಶ್ ಕಿಶೋರ್ ಅವರನ್ನು ಕಲಬುರಗಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಕರೊನಾ ರೋಗಿಗಳನ್ನು ಗುಣಪಡಿಸಿದ ವೈದ್ಯೆಗೆ ತಮ್ಮ ರಕ್ಷಣೆ ಸಾಧ್ಯವಾಗಲಿಲ್ವಾ?: ವೈರಲ್​ ಸುದ್ದಿಯ ಸತ್ಯಾಂಶ ನಿಜಕ್ಕೂ ಅಚ್ಚರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
