
ಬೆಂಗಳೂರು:ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ನೀಡಿದ ಹೇಳಿಕೆ ತಪ್ಪು ಮಾಹಿತಿಯಿಂದ ಕೂಡಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಪಿ.ರಾಜೀವ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿ, ಅವರು ಯಾವ ಮಾನಸಿಕ ಸ್ಥಿತಿಯಲ್ಲಿ, ಯಾರಿಂದ ಪ್ರೇರಣೆಗೆ ಒಳಗಾಗಿ ಈ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ ಎಂದರು.ಹೇಳಿಕೆ ಹಿಂದೆ ಕಾಣದ ಕೈಗಳ ಒತ್ತಡವಿದೆ ಎಂದು ಶಂಕಿಸಿದ ಅವರು, ನಾನು ಒಬ್ಬ ದಲಿತನಾಗಿದ್ದು, ರಾಜಕಾರಣಕ್ಕೆ ಬಂದ ಮೇಲೆ ಆರೆಸ್ಸೆಸ್ ಸಂಪರ್ಕದಲ್ಲಿದ್ದು, ಹತ್ತಿರದಿಂದ ನೋಡಿದ್ದೇನೆ. ಆ ರೀತಿ ಏನೂ ಆಗಿಲ್ಲ ಎಂದರು.ಆರೆಸ್ಸೆಸ್ ಎಲ್ಲರನ್ನೂ ಜೋಡಿಸುತ್ತದೆ. ಸಂಪೂರ್ಣ ಹಿಂದೂ ಸಮಾಜವನ್ನು ಒಗ್ಗೂಡಿಸುತ್ತದೆ. ಆರೆಸ್ಸೆಸ್, ಭಾರತ ಮಾತೆಯ ಫೋಟೊ ಇಟ್ಟುಕೊಂಡು ಪೂಜೆ ಮಾಡುತ್ತದೆ. ಅಲ್ಲಿ ಜಾತೀಯತೆ, ಒಡೆಯುವಂಥದ್ದು, ಜಾತಿ ಕೇಳುವ ಆಚರಣೆ ನನ್ನ ಗಮನಕ್ಕೆ ಬಂದಿಲ್ಲ ಎಂದರು.ದೇಶ ಕಟ್ಟಲು ಶ್ರಮಿಸುವ ಸಂಘಟನೆ ಇದು. ಸ್ವಯಂಸೇವಕರು ಯಾವ ಸನ್ಯಾಸಿಗೂ ಕಡಿಮೆ ಇಲ್ಲದಂತೆ ತ್ಯಾಗದ ಜೀವನ ರೂಪಿಸಿಕೊಳ್ಳುತ್ತಾರೆ. ದೇಶಸೇವೆಗೆ ಕಂಕಣಬದ್ಧರಾಗಿ ನಿಂತಿರುತ್ತಾರೆ. ಸ್ವಾರ್ಥರಹಿತ ಸೇವೆ ಮಾಡುವ ಈ ಸಂಘಟನೆಯ ಕುರಿತು ಅರಿವಿಲ್ಲದೆ, ತಿಳಿದುಕೊಳ್ಳದೆ, ಅನುಭವಕ್ಕೆ ಬರಲಾಗದೆ ಇಂಥ ಮಾತು ಹೇಳುವುದು ತಪ್ಪು ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − ten =
Remember me
