ತುಮಕೂರು:ಇತಿಹಾಸ ಪ್ರಸಿದ್ಧ ಗೂಳೂರು ಮಹಾಗಣಪತಿ ವಿಸರ್ಜನಾ ಮಹೋತ್ಸವ ಭಾನುವಾರ ರಾತ್ರಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವೈಭವಯುತವಾಗಿ ನಡೆಯಿತು.

ಬಲಿಪಾಢ್ಯಮಿ ದಿನದಂದು ಪ್ರತಿಷ್ಠಾಪನೆಗೊಂಡ ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಭಾನುವಾರ ರಾತ್ರಿ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡಿಮದ್ದಿನ ಅಬ್ಬರದ ನಡುವೆ ಮೂರ್ತಿಯನ್ನು ನಿಮಜ್ಜನ ಮಾಡಲಾಯಿತು.

ಎರಡು ದಿನ ನಡೆದ ಜಾತ್ರೆಯಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಆಗಮಿಸಿದ್ದರು. ಪೂಜಾ ಕೈಂಕರ್ಯದ ನಂತರ ಹೊನ್ನೇನಹಳ್ಳಿಯ 18 ಕೋಮಿನ ಜನರು ಮಹಾಗಣಪತಿಯನ್ನು ಸರ್ವಾಲಂಕೃತ ವಾಹನದಲ್ಲಿ ಕೂರಿಸಿ ಮಧ್ಯರಾತ್ರಿವರೆಗೂ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಗಣೇಶಮೂರ್ತಿ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನತೆ ಮತ್ತು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳು ಪೂಜೆ ಸಲ್ಲಿಸಿದರು. ಭಕ್ತಾದಿಗಳ ಹರ್ಷೋದ್ಘಾರ ನಡುವೆ ಮಹಾಗಣಪತಿ ವಿಸರ್ಜಿಸಲಾಯಿತು.
ಬರೋಬ್ಬರಿ 187 ನಾಣ್ಯಗಳನ್ನು ನುಂಗಿದ ಭೂಪ! ಸಾವಿನ ದವಡೆಯಿಂದ ಪಾರಾಗಿದ್ದೇ ರೋಚಕ… ಬಾಗಲಕೋಟೆಯಲ್ಲಿ ಘಟನೆ

ಹೊನ್ನಾಳಿಯಲ್ಲಿ ಭೀಕರ ಅಪಘಾತ, ASI ಪುತ್ರ ಸಾವು: ರೇಣುಕಾಚಾರ್ಯರ ಸಹೋದರನ‌ ಪುತ್ರನ ಪ್ರಕರಣ ನೆನಪಿಸುತ್ತಿದೆ ಈ ದುರ್ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + fourteen =
Remember me
