ಉಡುಪಿ:ಕರ್ನಾಟಕ ವೈಚಾರಿಕ ಸಾಹಿತ್ಯದ ಮೇರು ಕೊಂಡಿಯೊಂದು ಇದು ಕಳಚಿಕೊಂಡಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ.ಜಿ.ಭಾಸ್ಕರ್ ಮಯ್ಯ ಕೊವಿಡ್​ಗೆ ಇಂದು ಬಲಿಯಾಗಿದ್ದಾರೆ.
ಭಾಸ್ಕರ್​ ಮಯ್ಯ ಅವರಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ 4 ದಿನಗಳಿಂದ ಅವರು ಉಡುಪಿ ಜಿಲ್ಲೆಯ ಸಾಲಿಗ್ರಾಮದ ಪ್ರಣವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ 4:30ರ ಸುಮಾರಿಗೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಇವರು ಧೀರ್ಘಕಾಲ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಕೆಲಸ ನಿರ್ವಹಿಸಿದ್ದರು.
ವೈಚಾರಿಕ ಹಾಗೂ ಪ್ರಗತಿಪರ ಸಾಹಿತ್ಯದಲ್ಲಿ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.
ಕರೊನಾಗೆ ಬಲಿಯಾದ ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ

ಕೋವಿಶೀಲ್ಡ್‌ ಲಸಿಕೆ ತಯಾರಕ ಪೂನಾವಾಲಾಗೆ ಸಿಎಂ, ಪ್ರಭಾವಿಗಳಿಂದ ಕೊಲೆ ಬೆದರಿಕೆ! ಭದ್ರತೆಗೆ ಮೊರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
