ಬೆಂಗಳೂರು:ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್‌ನವರು ಗ್ರಾಹಕರಿಗೆ ನೀಡಿದ್ದ ಸಾಲದ ಮೊತ್ತಕ್ಕಿಂತ ನೂರು ಪಟ್ಟು ಹೆಚ್ಚಿನ ಮೊತ್ತವನ್ನು ವಸೂಲಿ ಮಾಡುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಹಿರಿಯ ನಾಯಕ ಹಾಗೂ ಮಾಜಿ ಶಾಸಕ ಎಚ್‌.ಡಿ.ಬಸವರಾಜು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌.ಡಿ.ಬಸವರಾಜು, ಗ್ರಾಹಕರೊಬ್ಬರು 2006-07ರಲ್ಲಿ ಕೇವಲ 9 ಲಕ್ಷ ಸಾಲ ಪಡೆದು, ನಂತರ ಅದನ್ನು ಪೂರ್ತಿಯಾಗಿ ಮರುಪಾವತಿಸಿದ್ದರು. ಆದರೂ ಅವರಿಂದ 57.30 ಕೋಟಿ ರೂಪಾಯಿ ಸಾಲ ಬಾಕಿ ಇದೆ ಎಂದು ಸುಳ್ಳು ಆರೋಪ ಹೊರಿಸಿ, ಕ್ರಿಮಿನಲ್‌ ಪ್ರಕರಣ ದಾಖಲಿಸಿ ಮಾನಸಿಕವಾಗಿ ಕುಗ್ಗಿಸಲು ಹಾಗೂ ಬಲವಂತವಾಗಿ ವಸೂಲಿ ಮಾಡಲು ಯತ್ನಿಸಿದ್ದಾರೆ. ಇಂತಹ ಬಹಳಷ್ಟು ಸುಳ್ಳು ಪ್ರಕರಣಗಳನ್ನು ಬ್ಯಾಂಕ್‌ ಈವರೆಗೆ ದಾಖಲಿಸಿದೆ. ಬ್ಯಾಂಕ್‌ ತಾಳಕ್ಕೆ ತಕ್ಕಂತೆ ಪೊಲೀಸರು ಕುಣಿಯುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:9 ತಿಂಗಳ ಹಿಂದೆ ಲಗ್ನ, ಕನಸುಗಳೆಲ್ಲ ಭಗ್ನ: ಗಂಡನ ಕಿರುಕುಳದಿಂದಾಗಿ 5 ತಿಂಗಳ ಗರ್ಭಿಣಿ ತವರಲ್ಲಿ ಆತ್ಮಹತ್ಯೆ
ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಕಾನೂನು ಘಟಕದ ಅಧ್ಯಕ್ಷ ಮಂಜುನಾಥ್‌ ಸ್ವಾಮಿ ಮಾತನಾಡಿ, ಸಾಲ ಪಡೆದಿದ್ದ ಗ್ರಾಹಕರಿಗೆ ಈ ರೀತಿ ಕಿರುಕುಳ ನೀಡುತ್ತಿರುವ ಗುರು ರಾಘವೇಂದ್ರ ಬ್ಯಾಂಕ್‌ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಲು ನಾವು ಮುಂದಾಗಿದ್ದೆವು. ಆದರೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಫ್‌ಐಆರ್‌ ಹಾಕಲು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳದಿರುವುದು ಸುಪ್ರೀಂ ಕೋರ್ಟ್‌ ತೀರ್ಪಿನ ಉಲ್ಲಂಘನೆ ಎಂದರು.
ಇದನ್ನೂ ಓದಿ:ಸಂಚಾರ ಪೊಲೀಸರು ಮಾಡಿದ ಈ ಕೆಲಸಕ್ಕೆ ಜನರು ಏನಂದ್ರು ನೋಡಿ…
ಬೃಹತ್‌ ಮೊತ್ತದ ಸಾಲ ಪಡೆದಿರುವುದಕ್ಕೆ ದಾಖಲೆ ಒದಗಿಸಬೇಕೆಂದು ವಕೀಲರ ಮೂಲಕ ನೋಟಿಸ್‌ ಕೊಟ್ಟು ಒಂದೂವರೆ ತಿಂಗಳಾದರೂ ಬ್ಯಾಂಕ್‌ನಿಂದ ಪ್ರತಿಕ್ರಿಯೆ ಬಂದಿಲ್ಲ. ಸೂಕ್ತ ದಾಖಲೆ ನೀಡಿ, ಅಷ್ಟು ಮೊತ್ತದ ಸಾಲ ಪಡೆದಿರುವುದು ನಿಜವೆಂದು ಬ್ಯಾಂಕ್‌ ಸಾಬೀತು ಪಡಿಸಬೇಕು. ಸುಖಾಸುಮ್ಮನೆ ಗ್ರಾಹಕರ ಮೇಲೆ ದಬ್ಬಾಳಿಕೆ ಮಾಡುವುದು ಸರಿಯಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮಧ್ಯ ಪ್ರವೇಶಿಸಿ, ಗ್ರಾಹಕರಿಗೆ ಆಗುತ್ತಿರುವ ಅನ್ಯಾಯ ತಡೆಯುವಂತೆ ಪೊಲೀಸರಿಗೆ ಸೂಚನೆ ನೀಡಬೇಕು. ತಪ್ಪಿದಲ್ಲಿ, ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸಲಾಗುವುದು ಎಂದು ಮಂಜುನಾಥ್‌ ಸ್ವಾಮಿ ಹೇಳಿದರು. ಎಎಪಿ ಮುಖಂಡರಾದ ಉಷಾ ಮೋಹನ್‌, ಮಂಜುನಾಥ್‌ ಪಾಪಣ್ಣ ಹಾಗೂ ಸಂತ್ರಸ್ತ ಕುಟುಂಬಸ್ಥರು ಹಾಜರಿದ್ದರು.
ವಂಚಕ ಪತಿಯ ಅರಸಿ ಬೆಂಗಳೂರಿಗೆ ಬಂದ್ಲು ಎರಡನೇ ಪತ್ನಿ; ಇವ ಶ್ರೀಮಂತರನ್ನೇ ನೋಡಿ ಮದ್ವೆ ಆಗಿ ಮೋಸ ಮಾಡ್ತಿದ್ದ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 1 =
Remember me
