ಬೆಂಗಳೂರು:ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಕೋ ಆಪರೇಟಿವ್ ಸೊಸೈಟಿ ವಿರುದ್ಧದ ವಂಚನೆ ಮತ್ತು ಅವ್ಯವಹಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಸರ್ಕಾರ ಆದೇಶಿಸಿದೆ.
ನೆಟ್ಟಕಲ್ಲಪ್ಪ ವೃತ್ತದಲ್ಲಿರುವ ಬ್ಯಾಂಕ್ ಹಾಗೂ ಸೊಸೈಟಿಯಲ್ಲಿ ಅವ್ಯವಹಾರ ನಡೆದಿರುವ ಸಂಬಂಧ ಬಸವನಗುಡಿ ಠಾಣೆಯಲ್ಲಿ ಕೆಪಿಐಡಿ ಕಾಯ್ದೆ ಸೇರಿ ಇತರ ಸೆಕ್ಷನ್​ಗಳಡಿ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಭ್ರಷ್ಟಾಚಾರ ನಿಗ್ರಹ ದಳದಲ್ಲಿಯೂ ಎಫ್​ಐಆರ್ ದಾಖಲಾಗಿ ತನಿಖೆ ನಡೆಯುತ್ತಿತ್ತು. ಇದರ ನಡುವೆ ಬ್ಯಾಂಕ್ ಗ್ರಾಹಕರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿ ಸಿಐಡಿಗೆ ತನಿಖೆ ಹೊಣೆ ವಹಿಸಬೇಕು. ಎರಡು ಸಂಸ್ಥೆಯಿಂದ ತನಿಖೆ ನಡೆಸುವುದು ಬೇಡವೆಂದು ಮನವಿ ಮಾಡಿದ್ದರು. ಇದರ ಅನ್ವಯ ಬ್ಯಾಂಕ್ ಮತ್ತು ಸೊಸೈಟಿ ವಿರುದ್ದದ ವಂಚನೆ ಮತ್ತು ಅವ್ಯವಹಾರ ಪ್ರಕರಣವನ್ನು ಸಿಐಡಿಗೆ ವಹಿಸಿ ಸರ್ಕಾರ ಜೂ.30ರಂದು ಆದೇಶಿಸಿದೆ.
ಇದನ್ನೂ ಓದಿ:ದೂರು ಕೊಡಲು ಹೊರಟವಳ ಹತ್ಯೆ
ಎಸಿಬಿ ತನಿಖೆಯಲ್ಲಿ ಅವ್ಯವಹಾರ ಬಯಲು:ಹೂಡಿಕೆ ಮಾಡಿರುವ ಗ್ರಾಹಕರ ಹಣವನ್ನು ಬ್ಯಾಂಕ್​ನ ಕೆಲ ಅಧಿಕಾರಿಗಳು, ಸಿಬ್ಬಂದಿ ಸೇರಿ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು 1,400 ಕೋಟಿ ರೂ. ಅವ್ಯವಹಾರ ನಡೆಸಿರುವುದು ಎಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಆರ್​ಬಿಐ ನಿಯಮಗಳಿಗೆ ವಿರುದ್ಧವಾಗಿ ಕೃತಕ ಠೇವಣಿ ಸೃಷ್ಟಿಸಿ 150 ಕೋಟಿ ರೂ. ಮೊತ್ತದ ಸಾಲವನ್ನು 60 ಕಾಲ್ಪನಿಕ ಗ್ರಾಹಕರಿಗೆ ಮಂಜೂರು ಮಾಡಿದ್ದಾರೆ. ಸಾರ್ವಜನಿಕರು ಖಾತೆ ತೆರೆಯುವಾಗ ನೀಡಿದ ಬ್ರೌಷರ್​ನಲ್ಲಿ ಎನ್​ಪಿಎ ಶೇ.1ಕ್ಕಿಂತ ಕಡಿಮೆಯಿದ್ದರೂ ನಿರಂತರವಾಗಿ ಶೇ.15 ರಿಂದ 16 ಎನ್​ಪಿಎ ಇರುವುದಾಗಿ ನಂಬಿಸಿದ್ದರು. ಬ್ಯಾಂಕ್​ನ ಎನ್​ಪಿಎ ಶೇ.25 ರಿಂದ 30 ಇರುವುದು ಎಸಿಬಿ ತನಿಖೆ ವೇಳೆ ಬೆಳಕಿಗೆ ಬಂದಿತ್ತು.
ಹಣ ದ್ವಿಗುಣ ನೆಪದಲ್ಲಿ ಮಹಿಳೆಯಿಂದ ವಂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 13 =
Remember me
