ಬೆಂಗಳೂರು:ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಮೂವರು ಆರೋಪಿಗಳ ಸುಳಿವು ಕೊಟ್ಟವರಿಗೆ ಸಿಐಡಿ ಪೊಲೀಸರು ಬಹುಮಾನ ಘೋಷಣೆ ಮಾಡಿದ್ದಾರೆ.
ಆರೋಪಿಯಾಗಿರುವ ಶ್ರೀ ಗುರುರಾಘ ವೇಂದ್ರ ಸಹಕಾರ ಬ್ಯಾಂಕ್​ನ ಅಧ್ಯಕ್ಷ ಕೆ. ರಾಮಕೃಷ್ಣ,ಆತನ ಪುತ್ರ ಮತ್ತು ನಿರ್ದೇಶಕ ಕೆ.ಆರ್. ವೇಣುಗೋಪಾಲ್ ಮತ್ತು ಸಾಲಗಾರ ಜಿ.ರಘುನಾಥ್ ತಲೆಮರೆಸಿಕೊಂಡವರು. ಅವರ ಕುರಿತು ಸುಳಿವು ಅಥವಾ ಹಿಡಿದು ಕೊಟ್ಟವರಿಗೆ ಬಹುಮಾನ ಕೊಡುವುದಾಗಿ ಸಿಐಡಿ ಎಸ್​ಪಿ (ಡಿಟೆಕ್ವಿವ್) ರಾಘವೇಂದ್ರ ಕೆ. ಹೆಗಡೆ ತಿಳಿಸಿದ್ದಾರೆ.
ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್​ನಲ್ಲಿ 1,400 ಕೋಟಿ ರೂ. ಅವ್ಯವಹಾರದ ಆರೋಪ ಕೇಳಿಬಂದಿತ್ತು. ಹೆಚ್ಚಿನ ತನಿಖೆ ಸಲುವಾಗಿ ಸಿಐಡಿಗೆ ವಹಿಸಿ ಸರ್ಕಾರ ಆದೇಶಿಸಿತ್ತು. ಪ್ರಕರಣ ದಾಖಲಾಗುತ್ತಿದಂತೆ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಈ ಕುರಿತು 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಘೋಷಿತ ಅಪರಾಧಿಗಳು ಎಂದು ಘೋಷಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಆರೋಪಿಗಳ ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಸಿಐಡಿ ಪೊಲೀಸರು ಮನವಿ ಮಾಡಿದ್ದಾರೆ.
ಇಲ್ಲಿ ಸಂರ್ಪಸಿ
ಸಿಐಡಿ ಆರ್ಥಿಕ ಅಪರಾಧ ಗುಪ್ತದಳ ಡಿವೈಎಸ್​ಪಿ ಮೊಬೈಲ್ ಸಂಖ್ಯೆ 94808 00181 ಮತ್ತು ದೂರವಾಣಿ ಸಂಖ್ಯೆ 080-22094485/ 22094498ಗೆ ಕರೆ ಮಾಡಲು ಕೋರಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
