ಬೆಂಗಳೂರು:ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆಯಿಂದಾಗಿ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ಕಳೆದ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಪಕ್ಷವನ್ನು ಜನರು ಕೇವಲ ಒಂದೇ ವರ್ಷದಲ್ಲಿ ಕಸದ ಬುಟ್ಟಿಗೆ ತಳ್ಳಿದ್ದಾರೆ. ಅದಕ್ಕಾಗಿ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು.ಅರಮನೆ ಆವರಣದಲ್ಲಿ ಹೊಸದಾಗಿ ಆಯ್ಕೆಯಾಗಿರುವ ಎನ್‌ಡಿಎ ಸಂಸದರಿಗೆ ಏರ್ಪಡಿಸಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಚುನಾವಣೆಯಲ್ಲಿ ಜನರು ಗ್ಯಾರಂಟಿಗಳನ್ನ ತಿಪ್ಪೆಗೆಸೆದಿದ್ದಾರೆ. ಸಿದ್ದರಾಮಯ್ಯ ಚುನಾವಣೆ ದೃಷ್ಟಿಯಿಂದಲೇ ಬಜೆಟ್ ಮಂಡಿಸಿದ್ದರು. ಇದು ಬೋಗಸ್ ಬಜೆಟ್ ಆಗಿದ್ದು, ಜನರು ನಂಬುವ ಸ್ಥಿತಿಯಲ್ಲಿ ಇಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆಂದರು.ಹಿಂದೆ ಬಿಜೆಪಿ ಪೆಟ್ರೋಲ್, ಡಿಸೆಲ್ ಬೆಲೆ 1 ರೂ ಹೆಚ್ಚಿಸಿದ್ದಾಗ, ಇದೇ ಸಿದ್ದರಾಮಯ್ಯ ಆಕ್ಷೇಪಣೆ ಮಾಡಿದ್ದರು. ಈಗ ಸಿಎಂ ಆಗಿರುವ ಸಿದ್ದರಾಮಯ್ಯ, ಚುನಾವಣೆ ಮುಗಿದ ಬೆನ್ನಲ್ಲಿಯೇ ಪೆಟ್ರೋಲ್, ಡೀಸೆಲ್ ಬೆಲೆ 3 ರೂ ಏರಿಕೆ ಮಾಡಿದಾರೆ. ಆದ್ದರಿಂದ ಜನ ಇವರನ್ನ ಮುಲಾಜಿಲ್ಲದೆ ಮನೆಗೆ ಕಳಿಸಬೇಕು ಎಂದು ಗುಡುಗಿದರು.ಕಾಂಗ್ರೆಸ್‌ಗೆ ಕೇಡುಗಾಲ ಶುರುವಾಗಿದೆ. ಮನಮೋಹನ್ ಸಿಂಗ್ ಅವಧಿಗಿಂತಲೂ ಹೆಚ್ಚು ಅನುದಾನವನ್ನು ಮೋದಿ ಸರ್ಕಾರ ಕೊಟ್ಟಿದ್ದರೂ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರಿಗೆ ಧಮ್ ಇದ್ರೆ ಇವತ್ತೆ ಚುನಾವಣೆ ಘೋಷಿಸಲಿ ಎಂದು ಸವಾಲು ಹಾಕಿದರು.ತೈಲ ದರ ಏರಿಸಿದ್ದು ಸಮಾಧಾನವಾಗಿಲ್ಲ ಎಂದು ಈಗ ನೀರಿನ ದರ ಏರಿಸಲು ಹೊರಟಿದ್ದಾರೆ. ಜನಸಾಮಾನ್ಯರಿಗೆ ಎಷ್ಟುಂತ ಕಷ್ಟ ಕೊಡುವುದು? ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇಲ್ಲ, ಎಷ್ಟು ನಾಲಿಗೆ ಇಟ್ಕೊಂಡು ಅವರು ಮಾತಾಡ್ತಾರೆ? ಎಂದು ಟೀಕಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + seven =
Remember me
