ಗದಗ:ಕರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವವನ್ನು ಆಸ್ಪತ್ರೆಯ ಸಿಬ್ಬಂದಿ ಎರಡು ದಿನ ಲಿಫ್ಟ್​ನಲ್ಲೇ ಬಿಟ್ಟಿದ್ದರು ಎಂಬ ಗಂಭೀರ ಆರೋಪ ಇಲ್ಲಿನ ಪ್ರತಿಷ್ಠಿತ ಆಸ್ಪತ್ರೆಯೊಂದರ ವಿರುದ್ಧ ಕೇಳಿ ಬಂದಿದೆ.
ಜಿಮ್ಸ್ ಕೋವಿಡ್ ಆಸ್ಪತ್ರೆಯು ಅವ್ಯವಸ್ಥೆಯ ಆಗರವಾಗಿದೆ ಎಂಬ ಆರೋಪ ಇರುವಾಗಲೇ ಮತ್ತೊಂದು ಯಡವಟ್ಟು ಸಂಭವಿಸಿದೆ ಎನ್ನಲಾಗಿದೆ. ಆಸ್ಪತ್ರೆಯ ಲಿಫ್ಟ್​ನಲ್ಲಿ ಕರೊನಾ ಸೋಂಕಿತ ಮೃತದೇಹವನ್ನು ಲಿಫ್ಟ್ ನಲ್ಲಿಯೇ ಕೆಲಕಾಲ ಇಡಲಾಗಿತ್ತು. ಅಲ್ಲದೆ, ಆಸ್ಪತ್ರೆಯ ಮೆಟ್ಟಿಲಿನ ಮೇಲೆ ಪಿಪಿಇ ಕಿಟ್ ಇಡುವ ಮೂಲಕ ಸಿಬ್ಬಂದಿ ಬೇಜವಾಬ್ದಾರಿತನ ಮೆರೆದಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿಬಂದಿದೆ.
ಇದನ್ನೂ ಓದಿರಿಕಿರುಕುಳಕ್ಕೆ ಯುವ ವಕೀಲ ಬಲಿ, ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ
ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಶವ ಸಾಗಿಸಲು ಆಂಬುಲೆನ್ಸ್​ ಬಂದದ್ದು ವಿಳಂಬವಾದ ನೆಪದಲ್ಲಿ ಲಿಫ್ಟ್​ನಲ್ಲೇ ಶವ ಇಡಲಾಗಿತ್ತು ಎಂಬ ಮಾತೂ ಕೇಳಿ ಬಂದಿದೆ. ಈ ಆರೋಪವನ್ನು ಜಿಮ್ಸ್​ ಆಸ್ಪತ್ರೆಯ ವೈದ್ಯರು ನಿರಾಕರಿಸಿದ್ದಾರೆ. ಆದರೆ, ಆರೋಪಕ್ಕೆ ಪುಷ್ಟೀಕರಿಸುವಂತೆ ಲಿಫ್ಟ್ ನಲ್ಲಿ ಶವ ಇರುವ ಫೋಟೋ ವೈರಲ್​ ಆಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.
ನೋಡ ನೋಡುತ್ತಿದ್ದಂತೆ ಗಣೇಶ ಮೂರ್ತಿ ಜತೆಯಲ್ಲೇ ಬಾಲಕರಿಬ್ಬರು ನೀರುಪಾಲು

ದೇವರಿಗೆ ಕೈಮುಗಿಯುತ್ತಿದ್ದಾಗಲೇ ವ್ಯಕ್ತಿಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
