
ಬೆಂಗಳೂರು:ರಾಜ್ಯದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಈಗ ಜನರ ಪಿಕ್ ಪಾಕೆಟ್ ಮಾಡುವ ಮೂಲಕ ವಿಶ್ವಾಸದ್ರೋಹ ಮಾಡಿದೆ ಎಂದು ಬಿಜೆಪಿ ರಾಷ್ಟೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿಲ್ಲಿ ಮಾತನಾಡಿ, ಗ್ಯಾರಂಟಿ ವಿರುದ್ದ ಅವರದ್ದೆ ಪಕ್ಷದ ಶಾಸಕರು, ಸಚಿವರು ಮಾತನಾಡುತ್ತಿದ್ದು, ಇದೇ ರೀತಿ ಆದರೆ, ಮುಂದೆ ನಾವು ದಿವಾಳಿ ಆಗುತ್ತೇವೆ ಎಂದು ಎಚ್ಚರಿಕೆ ನೀಡುತ್ತಿರುವುದು ವಾಸ್ತವತೆಗೆ ಹಿಡಿದ ಕನ್ನಡಿ ಎಂದರು.ಗ್ಯಾರಂಟಿಗಾಗಿ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್, ವಿದ್ಯುತ್, ಬಸ್ ಪ್ರಯಾಣದರ, ನೀರಿನ ದರ, ಸಿನಿಮಾ ಟಿಕೆಟ್ ಸೇರಿದಂತೆ ನಾನಾ ರೂಪದಲ್ಲಿ ಹೊಸ ತೆರಿಗೆ ಹಾಕುತ್ತಿದೆ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ಎಸ್‌ಸಿ ಸಮುದಾಯದ ಅಭಿವೃದ್ಧಿಗಾಗಿ ಮೀಸಲಿಟ್ಟ ಸುಮಾರು 25 ಸಾವಿರ ಕೋಟಿ ಹಣವನ್ನೂ ಬೇರೆಡೆಗೆ ವರ್ಗಾಯಿಸಿ ಲೂಟಿ ಮಾಡಲಾಗಿದೆ ಎಂದು ಟೀಕಿಸಿದರು.ರಾಜ್ಯದಲ್ಲಿ 1200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಈ ಕುರಿತು ಕಾಂಗ್ರೆಸ್ಸಿಗರು ಮಾತನಾಡುವುದಿಲ್ಲ ಏಕೆ ಎಂದು ಪ್ರಶ್ನಿಸಿದರು.
ಕೋಟಿ ಕೋಟಿ ಲೂಟಿವಾಲ್ಮೀಕಿ ನಿಗಮದಲ್ಲಿ 187 ಕೋಟಿ, ಮೂಡಾದಲ್ಲಿ 5 ಸಾವಿರ ಕೋಟಿ ಲೂಟಿ ನಡೆದಿದೆ. ದಲಿತರ ಹಣವನ್ನು ಲ್ಯಾಂಬೊರ್ಗಿನಿ ಕಾರು ಖರೀದಿಗೆ ಹಾಗೂ ಚುನಾವಣೆ ಖರ್ಚಿಗೆ ಬಳಸಿದ್ದಾರೆ. 89 ಕೋಟಿ ರೂ ಭ್ರಷ್ಟಾಚಾರವನ್ನು ಸಿಎಂ ಒಪ್ಪಿಕೊಂಡಿದ್ದಾರೆ. 120 ಕೋಟಿಯ ಅಕ್ಕಿ ಹಗರಣವೂ ನಡೆದಿದೆ. ಒಂದೊಅದು ಇಲಾಖೆಯಲ್ಲಿ ಒಂದೊಂದು ದರದಲ್ಲಿ ಖರೀದಿ ನಡೆಯುತ್ತಿದೆ. ವರ್ಗಾವಣೆ ದಂಧೆಗೆ ದಲಿತ ಸಮುದಾಯದ ಸಬ್ ಇನ್‌ಸ್ಪೆಕ್ಟರ್ ಬಲಿಯಾಗಿದ್ದಾರೆ. ಮೊಟ್ಟೆ ಹಗರಣದ ಬಗ್ಗೆ ಇನ್ನೂ ಕ್ರಮ ಆಗಿಲ್ಲ ಎಂದು ದೂರಿದರು.
ಅತ್ಯಾಚಾರಿಗಳ ರಕ್ಷಣೆರಾಜ್ಯದಲ್ಲಿ ಅತ್ಯಾಚಾರಿಗಳ ರಕ್ಷಣೆ, ಭ್ರಷ್ಟರ ರಕ್ಷಣೆ ನಡೆದಿದೆ. ಕಲಬುರ್ಗಿಯಲ್ಲಿ ಮಲಿಕ್‌ನಿಂದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ನೇಹಾ ಹಿರೇಮಠ್ ಹತ್ಯೆ ಪ್ರಕರಣ ಸೇರಿ ಹಲವಾರು ಪ್ರಕರಣಗಳು ನಡೆದಿವೆ. ಇವುಗಳ ಕುರಿತು ರಾಹುಲ್ಗಾಂಧಿ, ಪ್ರಿಯಾಂಕ ವಾಧ್ರಾ ಯಾಕೆ ಮಾತನಾಡುತ್ತಿಲ್ಲ ಎಂದು ಟೀಕಿಸಿದರು.ಕರ್ನಾಟಕದ್ದು ಡಬಲ್ ಟ್ರಬಲ್ ಸರ್ಕಾರ. ಕಟಾಕಟ್ ಲೂಟ್, ಝೂಟ್ ಸರ್ಕಾರ ಎಂದು ಟೀಕಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
