ಹಾಸನ:ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ದೇವೇಗೌಡರ ಮೊಮ್ಮಗ ಅಂದ್ರೆ ಮಾಜಿ ಸಚಿವ ಎಚ್​.ಡಿ. ರೇವಣ್ಣರ ಪುತ್ರ ಡಾ.ಸೂರಜ್​ ರೇವಣ್ಣ ಎಚ್​ಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಶನಿವಾರ ಅವಿರೋಧ ಆಯ್ಕೆಯಾದರು. ಆ ಮೂಲಕ ದೇವೇಗೌಡರ ಮತ್ತೊಂದು ಕುಡಿ ನೇರ ರಾಜಕೀಯ ಅಖಾಡಕ್ಕೆ ಇಳಿದಂತಾಗಿದೆ.ಇದನ್ನೂ ಓದಿರಿ‘ಇದು ಹೃದಯಹೀನ ಸರ್ಕಾರ…’ ಎಂದು ರಾಜ್ಯದ ವಿರುದ್ಧ ಕಿಡಿಕಾರಿದ ಬಿಜೆಪಿ ಎಂಎಲ್​ಸಿ
ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ಡಾ.ಸೂರಜ್​ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ಸುಗಮವಾಯಿತು.
ಚನ್ನರಾಯಪಟ್ಟಣ ತಾಲೂಕಿನಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಡಾ.ಸೂರಜ್​, ದಂಡಿಗನಹಳ್ಳಿ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಮಾಜಿಕ ಚಟುವಟಿಕೆಗಳ ಮೂಲಕ ಸಾರ್ವಜನಿಕ ಜೀವನಕ್ಕೆ ಹತ್ತಿರವಾಗಿದ್ದಾರೆ.
ತಂದೆ ಎಚ್​.ಡಿ. ರೇವಣ್ಣ, ಜಿಪಂ ಸದಸ್ಯೆ ಹಾಗೂ ತಾಯಿ ಭವಾನಿ ರೇವಣ್ಣ, ಸಹೋದರ ಸಂಸದ ಪ್ರಜ್ವಲ್​ ರೇವಣ್ಣ ಅವರಿಗೆ ಬೆನ್ನೆಲುಬಾಗಿ ನಿಂತು ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಡಾ.ಸೂರಜ್​ ಸಕ್ರಿಯರಾಗಿ ತೊಡಗಿಕೊಂಡಿದ್ದರು. ಇದೀಗ ಎಚ್​ಡಿಸಿಸಿ ಬ್ಯಾಂಕ್​ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದಾರೆ.
‘ಮುಂದಿನ ದಿನಗಳಲ್ಲಿ ಬಿ.ವೈ.ವಿಜಯೇಂದ್ರ ಅವರೇ ರಾಜ್ಯದ ಮುಖ್ಯಮಂತ್ರಿ…’

ಕಟ್ಟಿದ್ದು ಕೇವಲ 12 ರೂಪಾಯಿ, ಬಂದದ್ದು ಬರೋಬ್ಬರಿ 2 ಲಕ್ಷ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
