ಬೆಂಗಳೂರು:ರಾಜ್ಯಸರ್ಕಾರ ಇನ್ನೂ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ. ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಇನ್ನೂ ಯಾರಿಗೂ ಮಂತ್ರಿ ಸ್ಥಾನ ನೀಡಿಲ್ಲ.
ಹೀಗಿರುವಾಗ ಬೈ ಎಲೆಕ್ಷನ್​ನಲ್ಲಿ ಸೋತ ಎಚ್​.ವಿಶ್ವನಾಥ್​ ಹಾಗೂ ಎಂಟಿಬಿ ನಾಗರಾಜ್​ ಅವರು ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೊದಲು ಎಚ್​.ವಿಶ್ವನಾಥ್​ ಅವರು ಬಿ.ಎಸ್​.ಯಡಿಯೂರಪ್ಪನವರನ್ನು ಭೇಟಿಯಾಗಿ ತಮಗೂ ಸೂಕ್ತ ಸ್ಥಾನಮಾನ ನೀಡಲು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಜತೆಗೆ ತಮ್ಮ ಹುಣಸೂರು ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.ಬಳಿಕ ಸಿಎಂ ನಿವಾಸಕ್ಕೆ ಆಗಮಿಸಿದ ಎಂ.ಟಿ.ಬಿ.ನಾಗರಾಜ್​ ಕೂಡ ಬಿಎಸ್​ವೈ ಜತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ.
ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಹೋಗಿದ್ದವರೆಲ್ಲಿ ಎಚ್​.ವಿಶ್ವನಾಥ್​ ಹಾಗೂ ಎಂಟಿಬಿ ನಾಗರಾಜ್​ ಹೊರತುಪಡಿಸಿ ಉಳಿದವರೆಲ್ಲ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − eight =
Remember me
