ಬೆಂಗಳೂರು: ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಕುರಿತು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ.
ಅಶ್ಲೀಲ ಸಿಡಿಗಳು ಏಕೆ ಹಿಂದುಳಿದ ನಾಯಕರವೇ ಬಿಡುಗಡೆಯಾಗುತ್ತವೆ ಎಂಬುದು ಅರ್ಥವಾಗುತ್ತಿಲ್ಲ. ರಮೇಶ್ ಜಾರಕಿಹೊಳಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಬಹಿರಂಗವಾಗಿರುವ ಅಶ್ಲೀಲ ವಿಡಿಯೋ ಬಗ್ಗೆ ಕೂಲಂಕುಷ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ಒಂದು ಮರ್ಯಾದೆ ಇದೆ. ಕೆಟ್ಟ ಸಿಡಿಗಳನ್ನು ಬಿಡುಗಡೆ ಮಾಡಿ ಕರ್ನಾಟಕದ ಮರ್ಯಾದೆ ತೆಗೆಯಬೇಡಿ. ಕರುನಾಡು ಹೋಗಿ ಸಿಡಿ ರಾಜ್ಯ ಆಗ್ತಿದೆ. ಇದನ್ನು ಇಲ್ಲಿಗೆ ನಿಲ್ಲಿಸಿಬಿಡಿ ಎಂದು ಮನವಿ ಮಾಡಿದ್ದಾರೆ.
ಯಾರ್ಯಾರೋ ನಮ್ಮ ಬಳಿ ಸಿಡಿ ಇವೆ ಎಂದು ಹೇಳುತ್ತಿದ್ದಾರೆ. ಸಿಪಿ ಯೋಗಿಶ್ವರ ಕಡೆ ಸಿಡಿ ಇದೆಯಾ ಎಂದು ಪ್ರಶ್ನಿಸಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಬಗ್ಗೆ ದೊಡ್ಡ ಮಟ್ಟದ ತನಿಖೆ ಆಗಿ ರಾಜ್ಯದ ಜನತೆಗೆ ಸತ್ಯಾಸತ್ಯತೆ ತಿಳಿಯಬೇಕು ಎಂದು ಆಗ್ರಹಿಸಿದರು.
ರಾಕ್ಷಸಿ ಸರ್ಕಾರ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಶ್ವನಾಥ್, ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಾಕ್ಷಸಿ ಸರ್ಕಾರ ಆಗಿತ್ತು ಎಂಬ ಹೇಳಿಕೆಗೆ ಈಗಲೂ ಬದ್ದನಾಗಿದ್ದೇನೆ. ಕುಟುಂಬ ರಾಜಕಾರಣ ಅಂತ್ಯವಾಗಬೇಕು ಎಂಬುದು ನಮ್ಮ ಉದ್ದೇಶವಾಗಿತ್ತು ಎಂದರು.
ಜಾರಕಿಹೊಳಿ ಸೆಕ್ಸ್​ ವಿಡಿಯೋ ಬಹಿರಂಗ ಮಾಡಿರುವ ದಿನೇಶ್ ಕಲ್ಲಹಳ್ಳಿ ವಿರುದ್ಧ ದೂರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + nineteen =
Remember me
