ಬೆಂಗಳೂರು :ರಾಜ್ಯ ರಾಜಕಾರಣದಲ್ಲಿ ಉಂಟಾಗಿರುವ ಕುತೂಹಲದ ನಡುವೆ ಇಂದು ಎರಡನೇ ಬಾರಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಸುದ್ದಿಗಾರರೊಂದಿಗೆ ಮನಬಿಚ್ಚಿ ಮಾತನಾಡಿದ್ದಾರೆ. “ಜುಲೈ 25 ಕ್ಕೆ ಹೈಕಮಾಂಡ್​ನಿಂದ ಸಂದೇಶ ಬರಬಹುದು ಎಂದು ಕಾಯುತ್ತಿದ್ದೇನೆ. ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ” ಎಂದಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುವುದಕ್ಕೆ ಮುನ್ನ ಮಾತನಾಡಿದ ಸಿಎಂ ಬಿಎಸ್​​ವೈ, “ನಾನು ಅಧಿಕಾರದಲ್ಲಿ ಇರಲಿ, ಬಿಡಲಿ. ಪಕ್ಷ ಸಂಘಟನೆ ಮಾಡಿ ಮುಂದೆಯೂ ಅಧಿಕಾರಕ್ಕೆ ತರುವಲ್ಲಿ ಪ್ರಯತ್ನ ಮಾಡುತ್ತೇನೆ” ಎಂದಿದ್ದಾರೆ.
ಇದನ್ನೂ ಓದಿ:ಕೊನೆಗೂ ಮೌನ ಮುರಿದ ಸಿಎಂ! ಹೈಕಮಾಂಡ್​ ನಿರ್ಧಾರಕ್ಕೆ ತಲೆ ಬಾಗುವೆ…
ಜೊತೆಗೆ, “ನಾನು ಯಾರನ್ನು ಸಿಎಂ ಮಾಡಬೇಕೆಂದು ಹೇಳುವುದಿಲ್ಲ. ಹೈಕಮಾಂಡ್ ಯಾವ ತೀರ್ಮಾನ ಬೇಕಾದರೂ ಮಾಡಲಿ. ಯಾವ ಸಮುದಾಯಕ್ಕೆ ನೀಡಬೇಕೆಂಬುದರ ಬಗ್ಗೆಯೂ ಮಾತನಾಡಲ್ಲ” ಎಂದ ಯಡಿಯೂರಪ್ಪ, ವರಿಷ್ಠರ ಸಂದೇಶ ಇನ್ನೂ ಬಂದಿಲ್ಲ, ಈಗಲೇ ಏಕೆ ಅವಸರದ ಮಾತು ಎಂದು ನಿಗೂಢತೆ ಮುಂದುವರೆಸಿದ್ದಾರೆ.
ಸದನದ ಬಾವಿಗೆ ನುಗ್ಗಿ ಗದ್ದಲ; ಸಚಿವರ ಕೈಯಿಂದ ಹೇಳಿಕೆ ಪತ್ರ ಕಸಿದ ಟಿಎಂಸಿ ಸಂಸದ!

VIDEO | ಬಕ್ರೀದ್ ಪ್ರಯುಕ್ತ ವಿಶೇಷ ಸಾಮೂಹಿಕ ಪ್ರಾರ್ಥನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
