ಬೆಂಗಳೂರು:ಗಣೇಶೋತ್ಸವ ಸಂದರ್ಭದಲ್ಲಿ ಹಲಾಲ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕರಿಗೆ ಹಿಂದು ಜನಜಾಗೃತಿ ಸಮಿತಿ ಕರೆ ಕೊಟ್ಟಿದೆ.
ಮಹಾಲಕ್ಷ್ಮೀಲೇಔಟ್, ಯಶವಂತಪುರ, ಯಲಹಂಕ, ವಿದ್ಯಾರಣ್ಯಪುರ ಸೇರಿ ನಗರದ ವಿವಿಧೆಡೆ ಗಣೇಶೋತ್ಸವ ಮಂಡಳಿಗಳು, ಅಂಗಡಿಗಳಿಗೆ ಹಾಗೂ ಸಾರ್ವಜನಿಕರ ಬಳಿ ತೆರಳಿದ ಸಮಿತಿಯ ಪದಾಧಿಕಾರಿಗಳು ಭಾನುವಾರ ಜಾಗೃತಿ ಮೂಡಿಸಿದರು.
ಸಮಿತಿ ರಾಜ್ಯ ವಕ್ತಾರ ಮೋಹನ್‌ಗೌಡ ಮಾತನಾಡಿ, ಮಹಾರಾಷ್ಟ್ರ, ಗೋವಾ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿ ದೇಶದ ಹಲವು ರಾಜ್ಯಗಳಲ್ಲಿ ‘ಹಲಾಲ್ ಮುಕ್ತ ಗಣೇಶೋತ್ಸವ’ ಆಚರಿಸುವಂತೆ ನಮ್ಮ ಸಮಿತಿ ಕರೆ ನೀಡಿದೆ. ಅದರಂತೆ, ಬಾಗಲಕೋಟೆ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಂಗಳೂರು ಸೇರಿ ರಾಜ್ಯ ಹಲವು ಜಿಲ್ಲೆಗಳಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಬಳಸುವಂತೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಪೂಜಾ ಸಾಮಗ್ರಿಗಳು ಮತ್ತು ಪ್ರಸಾದವು ‘ಹಲಾಲ್ ಪ್ರಮಾಣೀಕೃತ’ ಅಗಿಲ್ಲವಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.
ಇದನ್ನೂ ಓದಿ:ವಿಶ್ವವಿದ್ಯಾಲಯಕ್ಕೆ ಪ್ರೊ.ಕೆ.ವೆಂಕಟಗಿರಿಗೌಡ ಹೆಸರು ನಾಮಕರಣಕ್ಕೆ ಕ್ರಮ
ಆಹಾರ ಧಾನ್ಯ, ಸಿಹಿತಿಂಡಿ, ಸೌಂದರ್ಯವರ್ಧಕ, ಸಸ್ಯಾಹಾರಿ ಆಹಾರ, ಔಷಧ, ಪ್ರವಾಸೋದ್ಯಮ, ರೆಸ್ಟೋರೆಂಟ್ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹಲಾಲ್ ಕಾಲಿಟ್ಟಿದೆ. ಈ ಬಾರಿ ಗಣೇಶೋತ್ಸವದಲ್ಲಿ ಭಕ್ತರಿಗೆ ‘ಹಲಾಲ್ ಪ್ರಮಾಣ ಪತ್ರ’ದ ಬಗ್ಗೆ ಕರಪತ್ರ ಹಂಚಲಾಗುತ್ತಿದೆ. ನಮ್ಮ ಮನವಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
