ಬೆಂಗಳೂರು:ಅನಾರೋಗ್ಯದಿಂದ ಬಳಲುತ್ತಿದ್ದ ಚಾಲಕನನ್ನು ಆಂಬ್ಯಲೆನ್ಸ್​ ನೆರವಿನೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಲ್ಲದೆ, ರಸ್ತೆಯಲ್ಲಿ ನಿಂತಿದ್ದ ಬಿಎಂಟಿಸಿ ಬಸ್​ ಅನ್ನು ಸ್ವತಃ ಚಲಾಯಿಸುವ ಮೂಲಕ ಹಲಸೂರು ಎಸಿಪಿ ರಾಮಚಂದ್ರ ಅವರು ಕರ್ತವ್ಯ ಪ್ರಜ್ಞೆಯ ಜತೆಗೆ ಮಾನವೀಯತೆಯನ್ನು ಮೆರೆದಿದ್ದಾರೆ.
ಶಿವಾಜಿನಗರ-ಕಾಡುಗೋಡಿ‌ ಮಾರ್ಗದ ಬಿಎಂಟಿಸಿ ಚಾಲಕನಿಗೆ ಮಾರ್ಗ ಮಧ್ಯೆದಲ್ಲಿಯೇ ಅನ್ಯಾರೋಗ್ಯದಿಂದ ಬಳಲಿದರು. ಹೀಗಾಗಿ ಚಾಲಕ ಓಲ್ಡ್ ಏರ್ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್​ ನಿಲ್ಲಿಸಿದ.
ಇದನ್ನೂ ಓದಿ:ವಿಪಕ್ಷಗಳ ಒಗ್ಗಟ್ಟಿನ ಕಹಳೆ: ಬೆಂಗಳೂರಿನಲ್ಲಿ ಮಹಾಘಟಬಂಧನ್ ಸಭೆ; ಇಂದು ನಿರ್ಣಯ
ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನಲೆ ಓಲ್ಡ್ ಏರ್ಪೋರ್ಟ್​ ರಸ್ತೆಯಲ್ಲಿ ಎಸಿಪಿ ರಾಮಚಂದ್ರ ಅವರು ಭದ್ರತೆಗೆ ನಿಯೋಜನೆಗೊಂಡಿದ್ದರು. ಈ ವೇಳೆ ರಸ್ತೆ ಮಧ್ಯ ನಿಂತಿದ್ದ ಬಿಎಂಟಿಸಿ ಬಸ್​ ಅನ್ನು ಸುಮಾರು ಒಂದು ಕಿ.ಮೀ ದೂರದ ಬಸ್​ ನಿಲ್ದಾಣದವರೆಗೆ ಸ್ವತಃ ಚಾಲನೆ ಮಾಡಿದ್ದಾರೆ.
ಇದಕ್ಕೂ ಮುನ್ನ‌ ಬಸ್​ ಚಾಲಕನನ್ನು ಆಂಬ್ಯುಲೆನ್ಸ್​ ಮೂಲಕ ಬೌರಿಂಗ್ ಆಸ್ಪತ್ರೆಗೆ ಎಸಿಪಿ ರಾಮಚಂದ್ರ ಅವರು ರವಾನಿಸಿದ್ದಾರೆ. ಎಸಿಪಿ, ಬಸ್​ ಚಾಲನೆ ಮಾಡಿರುವ ‌ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ‌ ವೈರಲ್​ ಆಗುತ್ತಿದ್ದು, ಪ್ರಯಾಣಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.(ದಿಗ್ವಿಜಯ ನ್ಯೂಸ್​)
ಮೂರು ವರ್ಷಕ್ಕೊಮ್ಮೆ ಅಧಿಕ ಮಾಸ

ಪುರುಷೋತ್ತಮ ಮಾಸದ ಮಹತ್ವ; ಈ ಮಾಸದಲ್ಲಿ ಶುಭಕಾರ್ಯ ವರ್ಜ್ಯ ಯಾಕೆ?

ವ್ಯವಸ್ಥಿತವಾಗಿ ಜಾರಿಯಾಗಲಿ: ಪ್ಯಾಕ್ಸ್ ಭ್ರಷ್ಟಾಚಾರ ಕಡಿವಾಣಕ್ಕೆ ಕಾಮನ್ ಕೇಡರ್ ಅಥಾರಿಟಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:19 − 3 =
Remember me
