
ಮಂಗಳೂರು: ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ನ ಹಮಾಸ್ ಉಗ್ರರ ನಡುವಿನ ಯುದ್ಧ ಮುಂದುವರಿದಿರುವಂತೆ ಮಂಗಳೂರಿನ ವ್ಯಕ್ತಿಯೊಬ್ಬ ಹಮಾಸ್ ಉಗ್ರರನ್ನು ಬೆಂಬಲಿಸಿ ವಿಡಿಯೋ ಹರಿಯಬಿಟ್ಟಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಶನಿವಾರ ಆರೋಪಿಯನ್ನು ಬಂಧಿಸಿದ್ದಾರೆ.
ಮೂಲತಃ ತೋಕೂರು ಜೋಕಟ್ಟೆಯ, ಪ್ರಸ್ತುತ ಬಂದರು ಜೆ.ಎಂ.ರಸ್ತೆ ನಿವಾಸಿ ಜಾಕಿರ್ ಯಾನೆ ಜಾಕಿ (58) ಬಂಧಿತ. ಹಮಾಸ್ ಉಗ್ರರನ್ನು ದೇಶಪ್ರೇಮಿಗಳೆಂದು ಕರೆದಿರುವ ಈತ, ಇಸ್ರೇಲ್ ಯುದ್ಧದಲ್ಲಿ ಅವರ ವಿಜಯಕ್ಕೆ ಪ್ರಾರ್ಥಿಸುವಂತೆ ವಿಡಿಯೋದಲ್ಲಿ ಕರೆ ನೀಡಿದ್ದಾನೆ. ಈತನ ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಪ್ಯಾಲೆಸ್ತೀನ್, ಗಾಜಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಲು ಸಂದೇಶ ನೀಡಿರುವ ಈತ ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ. ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಜಾಕಿರ್, ತಾಲಿಬಾನ್ ಉಗ್ರರ ರೀತಿ ಕುರ್ತಾ, ತಲೆಗೆ ರುಮಾಲು ತೊಟ್ಟ ವೇಷದಲ್ಲಿ ಕಾಣಿಸಿಕೊಳ್ಳುತ್ತಾನೆ. ಹಿಂದಿನಿಂದಲೂ ಈತ ಇದೇ ರೀತಿಯ ವೇಷದಲ್ಲಿ ಕಾಣಿಸಿಕೊಳ್ಳುತ್ತಿದ್ದ. 2019ರ ಸಿಎಎ ಪ್ರತಿಭಟನೆ ಸಂದರ್ಭದಲ್ಲೂ ಮುಂಚೂಣಿಯಲ್ಲಿದ್ದ.
ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧನ: ಜಾಕಿರ್ ಯಾನೆ ಜಾಕಿ ಹಮಾಸ್ ಸಂಘಟನೆ ಬಗ್ಗೆ ಎಲ್ಲರೂ ದುವಾ ಮಾಡಬೇಕೆಂದು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ವಾಟ್ಸಾೃಪ್‌ನಲ್ಲಿ ಹರಿಯಬಿಟ್ಟು ವೈರಲ್ ಮಾಡಿದ್ದಾನೆ. ಇದನ್ನು ವೀಕ್ಷಿಸಿದ ಜನ ಹಮಾಸ್ ಉಗ್ರರ ಪರ ಆತ ವಿಡಿಯೋ ಮಾಡಿದ್ದಾನೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಇಂಥ ವಿಡಿಯೋ ಸಂದೇಶಗಳಿಂದ ಸಮಾಜದಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಕೃತ್ಯಕ್ಕೆ ಸಂಬಂಧಿಸಿ ಶನಿವಾರ ಬಂದರು ಪೊಲೀಸ್ ಠಾಣೆಯ ಪಿಎಸ್‌ಐ ವಿನಾಯಕ ತೋರಗಲ್ ಸ್ವಯಂ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಏಳು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಆಯುಕ್ತ ಅನುಪಮ ಅಗರ್‌ವಾಲ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 2 =
Remember me
