ಬೆಂಗಳೂರು:ಕುವೆಂಪು ಅಧ್ಯಯನ ಸಂಸ್ಥೆಗೆ ಹಿರಿಯ ಸಂಶೋಧಕ ಡಾ.ಹಂ.ಪ.ನಾಗರಾಜಯ್ಯ ಅಧ್ಯಕ್ಷರಾದ ಬಳಿಕ ಈ ಸಂಸ್ಥೆಗೆ ಮರುಜನ್ಮ ಸಿಕ್ಕಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಮನು ಬಳಿಗಾರ್ ಹೇಳಿದ್ದಾರೆ.
ಬಿಎಂಶ್ರೀ ಪ್ರತಿಷ್ಠಾನ ವತಿಯಿಂದ ಶನಿವಾರ ಎನ್.ಆರ್.ಕಾಲನಿಯ ಬಿಎಂಶ್ರೀ ಕಲಾಭವನದಲ್ಲಿ ಆಯೋಜಿಸಲಾಗಿದ್ದ ‘ಕಂಬತ್ತಹಳ್ಳಿ ಜೀವಣ್ಣ ಪದ್ಮಾವತಮ್ಮ ದತ್ತಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಸಾಹಿತ್ಯ, ಸಂಶೋಧನಾ ಕ್ಷೇತ್ರದಲ್ಲಿ ಹಂಪನಾ ಸೇವೆ ಸ್ಮರಣೀಯ. ಅವರು ಜ್ಞಾನ ಭಂಡಾರವಿದ್ದಂತೆ. ಹಳೆಗನ್ನಡದಲ್ಲಿ ಸೊಗಸಾಗಿ ಭಾಷಣ ಮಾಡುವಷ್ಟು ಸಾಮರ್ಥ್ಯ ಇದೆ. ಪಂಪ, ರನ್ನ ರಚಿಸಿದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿದ್ದಾರೆ. ಇವರು ನಮಗೆಲ್ಲರಿಗೂ ಮಾದರಿ ವ್ಯಕ್ತಿಯಾಗಿದ್ದಾರೆ ಎಂದು ಬಣ್ಣಿಸಿದರು.
ಇದನ್ನೂ ಓದಿ:‘ನಾ ನಿನ್ನ ಮದ್ವೆ ಆಗಲ್ಲ’ ಎಂದಿದ್ದೇ ದ್ವಿತೀಯ ಪಿಯು ವಿದ್ಯಾರ್ಥಿನಿ ಮಾಡಿದ ತಪ್ಪಾ?
ಹಿರಿಯ ಸಂಶೋಧಕ ಡಾ.ಹಂ.ಪ.ನಾಗರಾಜಯ್ಯ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ನಮ್ಮ ರಾಜ್ಯದ ನೆಲ, ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ವಿದೇಶಿಗರೂ ಹೆಚ್ಚು ಆಸಕ್ತಿ ತೋರುತ್ತಿರುವುದು ಗಮನಾರ್ಹ. ಇದರಿಂದಾಗಿ ಮುಂದಿನ ದಿನಗಳಲ್ಲಿ ಕನ್ನಡ ಭಾಷೆ ಇನ್ನಷ್ಟು ಬೆಳೆಯಲಿದೆ. ತಾವು ನೆಲೆಸಿದ್ದ ಸ್ಥಳದಲ್ಲಿನ ಭಾಷೆ, ನೆಲದ ಬಗ್ಗೆಯೇ ಸಾಹಿತ್ಯ ರಚಿಸುವುದು ಮುಖ್ಯ. ಹಿಂದಿನ ಸಾಹಿತಿಗಳು ಬೇರೆ ಬೇರೆ ಸಮುದಾಯದಿಂದ ಬಂದರೂ ಕನ್ನಡಕ್ಕೆ ಆದ್ಯತೆ ಕೊಟ್ಟು ಕೆಲಸ ಮಾಡಿದ್ದರು ಎಂದರು.
ಹಿರಿಯ ಸಂಶೋಧಕ ಡಾ.ಹಂ.ಪ.ನಾಗರಾಜಯ್ಯ ಅವರಿಗೆ ‘ಕಂಬತ್ತಹಳ್ಳಿ ಜೀವಣ್ಣ ಪದ್ಮಾವತಮ್ಮ ದತ್ತಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತಿ ಡಾ.ಬೈರಮಂಗಲ ರಾಮೇಗೌಡ, ನಿವೃತ್ತ ಸರ್ಕಾರಿ ಅಧಿಕಾರಿ ಕೆ.ಜೆ.ಪಾರ್ಶ್ವನಾಥ ಮತ್ತಿತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − thirteen =
Remember me
