ಹೊಸಪೇಟೆ: ಮೂರನೇ ಶ್ರಾವಣ ಸೋಮವಾರ ನಿಮಿತ್ತ ದಕ್ಷಣ ಕಾಶಿ ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇಗುಲದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.
ಹಂಪಿ ವಿದ್ಯಾರಣ್ಯ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಅವರು ವಿರೂಪಾಕ್ಷೇಶ್ವರನಿಗೆ ಅಭಿಷೇಕ, ಹೂವಿನ ಅಲಂಕಾರ ಮಾಡಿ, ಆರತಿ ಬೆಳಗಿ ವಿಶೇಷ ಪೂಜೆ ನೆರವೇರಿಸಿದರು. ಹೊಸಪೇಟೆ ಆಟೋ ಚಾಲಕರ ಸಂಘದಿಂದ ದೇವಸ್ಥಾನದ ಪರಿಸರದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆಗೆ ನಡೆಯಿತು.
ಬಳ್ಳಾರಿ, ಕೊಪ್ಪಳ, ರಾಯಚೂರು, ದಾವಣಗೆರೆ ಸೇರಿದಂತೆ ನೆರೆಯ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆದರು. ಬೆಳಿಗ್ಗೆಯಿಂದ ಸಂಜೆಯ ವರೆಗೆ ಭಕ್ತರು ಬಂದು ಹೋಗುವುದು ನಡೆದೇ ಇತ್ತು. ದೇವರ ದರ್ಶನ ಪಡೆದ ಭಕ್ತರು ಹಂಪಿ ಎದುರು ಬಸವಣ್ಣ ಮಂಟಪ, ಚಕ್ರತೀರ್ಥ, ಕೋದಂಡರಾಮ ದೇವಸ್ಥಾನ, ಕಮಲ ಮಹಲ, ವಿಜಯ ವಿಠಲ ದೇವಸ್ಥಾನ ಸೇರಿದಂತೆ ಇತರೆ ಸ್ಮಾರಕಗಳನ್ನು ಕಣ್ತುಂಬಿಕೊಂಡರು. ನಗರದ ಸಣ್ಣಕ್ಕಿ ವೀರಭದ್ರೇಶ್ವರ, ವಡಕರಾಯ ದೇವಸ್ಥಾನಗಳಿಗೆ ಜನ ಬಂದು ದೇವರ ದರ್ಶನ ಪಡೆದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − four =
Remember me
