ಮೈಸೂರು:ಇಲ್ಲಿ ಯಾವುದೇ ಕಾರಣಕ್ಕೂ ಹನುಮ ಜಯಂತಿ ನಿಲ್ಲಬಾರದು. ಮುಂದಿನ ವರ್ಷ ಈ ವರ್ಷಕ್ಕಿಂತಲೂ ಜೋರಾಗಿ ನಡೆಯಬೇಕು ಎಂದು ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದ್ದಾರೆ. ಹನುಮ ಜಯಂತಿ ಸಂದರ್ಭದಲ್ಲಿ ಕೊಲೆಗೀಡಾದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಶ್ರದ್ಧಾಂಜಲಿ ಸಭೆಯಲ್ಲಿ ಇಂದು ಪಾಲ್ಗೊಂಡ ಅವರು ಈ ಕರೆ ನೀಡಿದರು.
ಇದನ್ನೂ ಓದಿ:INDIAಗೆ ಯಾರ ನೇತೃತ್ವ?: ಮಲ್ಲಿಕಾರ್ಜುನ ಖರ್ಗೆ ಉತ್ತರ ಇದು..
ಹನುಮ ಜಯಂತಿ ಮಾಡುವುದಕ್ಕೆ ಅಂತಲೇ ಅನೇಕ ಸಂಘಟನೆಗಳು ಇವೆ. ನಾವು ಬೇರೆ ಕೆಲಸ ಮಾಡೋಣ ಅಂತ ಹೇಳುತ್ತಿದ್ದೆ. ಆದರೆ ತಿ.ನರಸೀಪುರದಲ್ಲಿ ವೇಣುಗೋಪಾಲ್‌ನಂತಹ ಹುಡುಗರು ಹನುಮ ಜಯಂತಿಗೋಸ್ಕರವೇ ಹುಟ್ಟಿಕೊಂಡಿದ್ದರು. ವೇಣುಗೋಪಾಲ್ ಸಾವು ಸ್ವಲ್ಪ ದಿನಕ್ಕೆ ಮರೆತು ಹೋಗಬಹುದು. ಹೀಗೆ ಮರೆತು ಹೋಗುವ ಪ್ರವೃತ್ತಿ ಬೆಳೆದರೆ ಅಪಾಯಕಾರಿ.ವೇಣುಗೋಪಾಲ್ ಸಾವು ಮರೆತು ಹೋಗಲು ಬಿಡಬಾರದು. ಆತ ಹಣತೆ ಹಚ್ಚಿದ್ದಾನೆ, ನಾವು ಆ ಹಣತೆಗೆ ತೈಲ ಆಗಬೇಕು. ಇಲ್ಲಿ ಯಾವುದೇ ಕಾರಣಕ್ಕೂ ಹನುಮ ಜಯಂತಿ ನಿಲ್ಲಬಾರದು. ಮುಂದಿನ ವರ್ಷ ಈ ವರ್ಷಕ್ಕಿಂತಲೂ ಜೋರಾಗಿ ನಡೆಯಬೇಕು. ಅದೇ ವೇಣುಗೋಪಾಲ್ ಸಾವಿಗೆ ನಿಜವಾದ ಶ್ರದ್ಧಾಂಜಲಿ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಇದನ್ನೂ ಓದಿ:ವಿಶ್ವ ಕುಂದಾಪುರ ಕನ್ನಡ ದಿನಕ್ಕೆ ಸಿಎಂ-ಡಿಸಿಎಂ, ಸಚಿವರು ಸಂಸದರ ಶುಭಾಶಯ: ಬೆಂಗಳೂರಲ್ಲಿ 23ರಂದು ಆಚರಣೆ
ನಮ್ಮದೇ ಹುಡುಗನ ಸಾವಿಗೆ ಶ್ರದ್ಧಾಂಜಲಿ ಸಭೆ ಮಾಡಲು ಅನುಮತಿ ಸಿಗಲ್ಲ ಎಂದರೆ ಯಾವ ಸಮಾಜದಲ್ಲಿ ನಾವಿದ್ದೇವೆ? ಇವರು ಕೊಲೆ ಮಾಡಿದವರಿಗಿಂತ ಕಚಡ ಜನರು. ಕಂಬನಿ ಸುರಿಸಲು ಜಾಗ ಕೊಡಲ್ಲ ಅಂದರೆ ಏನು ಹೇಳಬೇಕು? ವೇಣುಗೋಪಾಲ್ ಮನೆ ಹತ್ತಿರ 20 ಜನ ಸೇರಿ ಮಾಡಿಕೊಳ್ಳಿ ಎಂದಿದ್ದರು. ನಾವು ಹೈಕೋರ್ಟ್‌ಗೆ ಹೋಗಿ ಹೋರಾಡಿ ಪರ್ಮಿಷನ್ ತರಬೇಕಾಯಿತು ಎಂದು ಹೇಳಿದ ಸೂಲಿಬೆಲೆ, ಹಿಂದೂ ಸಮಾಜವನ್ನು ಹೆದರಿಸುವ, ಬೆದರಿಸುವ ಕೆಲಸ ಆಗುತ್ತಿದೆ ಎಂದರು.
ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?

ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eighteen =
Remember me
